ಬೆಂಗಳೂರು,ಆ.29-ನೆರೆಯ ಕೇರಳದಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು, ರಾಜ್ಯದಲ್ಲಿ ಒಂದರಿಂದ 8ನೇ ತರಗತಿ ಶಾಲೆಗಳ ಪುನರಾರಂಭ, ಗಣೇಶ ಉತ್ಸವ ಆಚರಣೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಮಹತ್ವದ ಸಭೆ ನಡೆಸಲಿದ್ದಾರೆ.ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಮತ್ತು ಸಚಿವರ ಸಭೆ ಕರೆದಿರುವ ಅವರು ನಾಳೆ ಕೆಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ.
ಕೇರಳದಲ್ಲಿ ಕಳೆದ ಎರಡು ವಾರಗಳಿಂದ ಪ್ರತಿನಿತ್ಯ 25 ಸಾವಿರದಿಂದ 32 ಸಾವಿರದವರೆಗೂ ಸೋಂಕಿನ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ವೀಕೆಂಡ್ ಲಾಕ್ಡೌ2ನ್ ವಿಸ್ತರಣೆ ಹಾಗೂ ರಾತ್ರಿ ಕಫ್ರ್ಯೂ ವಿಸುವ ಬಗ್ಗೆಯೂ ಚರ್ಚೆ ನಡೆಯಲಿದೆ.
ಈಗಾಗಲೇ ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಕಳೆದ ಒಂದು ತಿಂಗಳಿನಿಂದ ಹೆಚ್ಚಿನ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಕೇಂದ್ರದಿಂದ ರಾಜ್ಯಕ್ಕೆ ಆಗಮಿಸುವವರಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮತ್ತು ಕೋವಿಡ್ ಲಸಿಕೆ ಪಡೆದ ಪ್ರಮಾಣ ಪತ್ರವನ್ನು ನೀಡಬೇಕೆಂದು ಸೂಚಿಸಲಾಗಿದೆ.
ಆದಾಗ್ಯೂ ಕೇರಳದಲ್ಲಿ ಸೋಂಕು ಪ್ರಕರಣ ಹೆಚ್ಚುತ್ತಿರುವುದರಿಂದ ಆತಂಕಗೊಂಡಿರುವ ರಾಜ್ಯ ಸರ್ಕಾರ ಮತ್ತಷ್ಟು ಬಿಗಿ ಕ್ರಮಗಳನ್ನು ತೆಗೆದುಕೊಳ್ಳುವ ಸಂಬಂಧವಾಗಿ ತಜ್ಞರು ಮತ್ತು ಸಚಿವರ ಸಭೆ ಕರೆದಿದೆ.ಕೆಲವು ಕಡೆ ವೀಕೆಂಡ್ ಕಫ್ರ್ಯೂ ಹಾಕಿರುವುದಕ್ಕೆ ವಿರೋಧ ವ್ಯಕ್ತವಾಗಿದೆ.ಸಭೆಯಲ್ಲಿ ತಜ್ಞರು ಸರ್ಕಾರಕ್ಕೆ ಯಾವ ಸಲಹೆಗಳನ್ನು ನೀಡಲಿದ್ದಾರೆ ಅದನ್ನು ಮುಖ್ಯಮಂತ್ರಿಗಳು ಅನುಷ್ಠಾನ ಮಾಡಲಿದ್ದಾರೆಯೇ ಎಂಬ ಯಕ್ಷ ಪ್ರಶ್ನೆ ಎದುರಾಗಿದೆ.
ಶಾಲೆಗಳ ಬಗ್ಗೆಯೂ ಚರ್ಚೆ:
ಈಗಾಗಲೇ 9ರಿಂದ 12ನೇ ತರಗತಿವರೆಗೆ(ಕೆಲವು ಜಿಲ್ಲೆಗಳನ್ನು ಹೊರತುಪಡಿಸಿ) ಶಾಲಾಕಾಲೇಜುಗಳನ್ನು ಪ್ರಾರಂಭಿಸಲಾಗಿದೆ. ಇದಕ್ಕೆ ಸಾರ್ವಜನಿಕರಿಂದಲೂ ದಿನದಿಂದ ದಿನಕ್ಕೆ ಉತ್ತಮ ಪ್ರತಿಕ್ರಿಯೆ ಕಂಡುಬರುತ್ತಿದೆ.ಇದರ ಬೆನ್ನಲೇ 1ರಿಂದ 8ನೇ ತರಗತಿವರೆಗೂ ಶಾಲೆಗಳನ್ನು ಆರಂಭಿಸಬೇಕೆಂಬ ಬೇಡಿಕೆಯು ಹೆಚ್ಚುತ್ತಿದೆ. ಈ ಬಗ್ಗೆಯೂ ನಾಳೆ ತಜ್ಞರ ಜೊತೆ ಸಿಎಂ ಚರ್ಚೆ ಮಾಡಲಿದ್ದಾರೆ.
ಕಳೆದ ಒಂದು ವರ್ಷದಿಂದ ಮುಚ್ಚಲ್ಪಟ್ಟಿರುವ ಶಾಲಾಕಾಲೇಜುಗಳನ್ನು ಆರಂಭಿಸುವ ಬಗ್ಗೆ ತಜ್ಞರು ನೀಡುವ ವರದಿ, ಪೋಷಕರ ಅಭಿಪ್ರಾಯ ಸೇರಿದಂತೆ ಎಲ್ಲ ಸಾಧಕ-ಬಾಧಕಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಹೆಚ್ಚುತ್ತಿರುವ ಒತ್ತಡ:
ಇನ್ನು ಮುಂದಿನ ತಿಂಗಳು 10ರಂದು ಗೌರಿಗಣೇಶ ಹಬ್ಬ ಇರುವುದರಿಂದ ಈಗಾಗಲೇ ರಾಜ್ಯ ಸರ್ಕಾರ ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ಹಬ್ಬವನ್ನು ಸಾರ್ವಜನಿಕರು ಸರಳವಾಗಿ ಆಚರಿಸುವಂತೆ ಸರ್ಕಾರ ಅಸೂಚನೆ ಹೊರಡಿಸಿದೆ. ಅದರೆ ಇದಕ್ಕೆ ಸಾರ್ವಜನಿಕರಿಂದ ಆಕ್ಷೇಪ ಕೇಳಿಬಂದಿದೆ.
ಗಣಪತಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಅನುಮತಿ ಕೊಡಬೇಕೆಂದು ಹಿಂದೂಪರ ಸಂಘಟನೆಗಳು ಸರ್ಕಾರದ ಮೇಲೆ ಒತ್ತಡ ಹಾಕುತ್ತಿವೆ. ಇದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ನಾಳಿನ ಸಭೆಯಲ್ಲಿ ಇದು ಕೂಡ ಇತ್ಯರ್ಥವಾಗಲಿದೆ.
No comments:
Post a Comment