Monday 23 August 2021

ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳನ್ನು ಪುನಾರಂಭಿಸುವ ಕುರಿತು ಶಿಕ್ಷಣ ಸಚಿವ ನಾಗೇಶ್ ಮಹತ್ವದ ಮಾಹಿತಿ.

 

ಬೆಂಗಳೂರು : ಶೀಘ್ರದಲ್ಲೇ ರಾಜ್ಯದಲ್ಲಿ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ. ಸಿ ನಾಗೇಶ್ ಹೇಳಿದರು.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಆ.30ರಂದು ಮಕ್ಕಳ ತಜ್ಞರು, ಶಿಕ್ಷಣ ತಜ್ಞರು, ಕೋವಿಡ್-19 ತಜ್ಞರ ವಿವಿಧ ಸಮಿತಿ ಸದಸ್ಯರ ಜೊತೆ ಮುಖ್ಯಮಂತ್ರಿಯವರು ಸಭೆ ನಡೆಸಲಿದ್ದಾರೆ. ನಂತರ ತಾಂತ್ರಿಕ ಸಲಹಾ ಸಮಿತಿಯಿಂದ ಬರುವ ವರದಿ ಆಧರಿಸಿ 1 ರಿಂದ 8ನೇ ತರಗತಿಗಳನ್ನು ಎರಡು ಹಂತಗಳಲ್ಲಿ ಅಥವಾ ಒಂದೇ ಹಂತದಲ್ಲಿ ಆರಂಭಿಸುವ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದರು.

ಈಗ ಆರಂಭಿಸಿರುವ 9ರಿಂದ 12ನೇ ತರಗತಿಗಳಿಗೆ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ. ಸಲಹೆ ಸೂಚನೆಗಳು, ಅಭಿಪ್ರಾಯಗಳನ್ನು ಕೂಡ ಪರಿಗಣಿಸಲಾಗುತ್ತದೆ ಎಂದು ಸಚಿವ ನಾಗೇಶ್ ತಿಳಿಸಿದರು.

ಒಂದೂವರೆ ವರ್ಷದ ಬಳಿಕ 9 ಮತ್ತು 10 ತರಗತಿ ಹಾಗೂ ಪ್ರಥಮ ಮತ್ತು ದ್ವಿತೀಯ ಪಿಯು ಭೌತಿಕ ತರಗತಿಗಳು ಪುನಾರಂಭವಾಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಸಚಿವರು ಹೇಳಿದರು.

No comments:

Post a Comment