ಬೆಳಗಾವಿ: ಬೆಳಗಾವಿಯಲ್ಲಿ 15 ವರ್ಷದ ಬಾಲಕಿ ಮೇಲೆ ನಡೆದಿದ್ದ ಗ್ಯಾಂಗ್
ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಬೆಳಗಾವಿ ಎಸ್ ಪಿ ಲಕ್ಷ್ಮಣ ನಿಂಬರಗಿ ಮಾಹಿತಿ
ನೀಡಿದ್ದು, ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾದ ಒಂದೇ ದಿನದಲ್ಲಿ ಘಟಪ್ರಭಾ ಠಾಣೆ ಪೊಲೀಸರು ನಾಲ್ವರು
ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ.
ಜಮೀನಿಗೆ ತೆರಳಿದ್ದ 15 ವರ್ಷದ
ಬಾಲಕಿ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿ, ಬೆದರಿಕೆಯೊಡ್ಡಿದ್ದರು.
ಬಾಲಕಿ ಪೋಷಕರು ನಿನ್ನೆ ದೂರು ದಾಖಲಿಸಿದ್ದರು. 20 ದಿನಗಳ ಹಿಂದೆ
ನಡೆದಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿತ್ತು.
No comments:
Post a Comment