Wednesday, 18 August 2021

ಬದುಕಿದ್ದರೆ ಇದೇ ಅವಧಿಯಲ್ಲಿಯೇ ನಾನು ಸಿಎಂ ಆಗ್ತೀನಿ: ಉಮೇಶ್ ಕತ್ತಿ ಹೊಸ ಬಾಂಬ್..!

 ಬೆಂಗಳೂರು: ಬಿಜೆಪಿ ಸಚಿವರ ಖಾತೆ ಕ್ಯಾತೆ ನಡುವೆಯೇ ಉಮೇಶ್ ಕತ್ತಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬರುವ ದಿನಗಳಲ್ಲಿ ನಾನು ಕೂಡ ಮುಖ್ಯಮಂತ್ರಿ ಆಗಬಹುದು. ಇದೇ ಅವಧಿಯಲ್ಲಿ ಸಿಎಂ ಆಗುತ್ತೇನೆ ಅಂತಾ ಉಮೇಶ್ ಕತ್ತಿ ಹೊಸ ಬಾಂಬ್ ಸಿಡಿಸಿದ್ದಾರೆ.

75ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಹಿನ್ನೆಲೆ ಬಾಗಲಕೋಟೆಯ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ  ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಧ್ವಜಾರೋಹಣ‌ ನೆರವೇರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಾನು ಜೀವಂತ ಇದ್ದರೇ ಇದೇ ಅವಧಿಯಲ್ಲಿ, ಸತ್ತರೇ ಮುಂದಿನ ಅವಧಿಯಲ್ಲಿ ಸಿಎಂ ಆಗುವೆ. ಸತ್ತರೆ ನನ್ನ ಕಡೆಯಿಂದ ಏನೂ ಮಾಡಲು ಆಗಲ್ಲವೆಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ. ಅಲ್ಲದೆ ನಗುನಗುತ್ತಲೇ ಸಿಎಂ ಆಗುವ ಆಸೆಯನ್ನು ಉಮೇಶ್ ಕತ್ತಿ ತೇಲಿಬಿಟ್ಟಿದ್ದಾರೆ. ಅವರ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಹೊಸ ಬಿರುಗಾಳಿ ಎಬ್ಬಿಸಿದೆ.

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...