Tuesday, 24 August 2021

ಸಿಎಂ ಆದೇಶದಂತೆ ನನ್ನ ಖಾತೆಯನ್ನು ನಿಭಾಯಿಸುತ್ತೇನೆ : ಸಚಿವ ಆನಂದ್ ಸಿಂಗ್

 

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಸಂಜೆ ದೆಹಲಿಗೆ ಪ್ರಯಾಣ ಬೆಳಸಲಿದ್ದು, ದೆಹಲಿ ಭೇಟಿ ಬಳಿಕ ಎಲ್ಲವನ್ನೂ ಸರಿ ಮಾಡುವ ಭರವಸೆ ನೀಡಿದ್ದಾರೆ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆನಂದ್ ಸಿಂಗ್, ನಾಳೆ ಸಂಜೆ ಸಿಎಂ ಬೊಮ್ಮಾಯಿ ದೆಹಲಿಗೆ ತೆರಳಲಿದ್ದು, ಎಲ್ಲವನ್ನೂ ಸರಿಮಾಡುವ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಮೊದಲು ಕೊಟ್ಟಿರುವ ಖಾತೆಯನ್ನು ನಿಭಾಯಿಸಿ ಎಂದು ಸಿಎಂ ಬೊಮ್ಮಾಯಿ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಹೀಗಾಗಿ ಅವರ ಆದೇಶದಂತೆ ನಾನು ಇಂದು ಕೆಲಸಕ್ಕೆ ಬಂದಿದ್ದೇನೆ. ನನ್ನ ಖಾತೆಯನ್ನು ನಿಭಾಯಿಸುತ್ತೇನೆ. ಈ ಹಿಂದೆ ಸಲ್ಲಿಸಿದ್ದ ಮನವಿಯನ್ನು ಸಲ್ಲಿಸಿದ್ದೇನೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ನನ್ನಪರಿಗಣಿಸುವುದಾಗಿ ಹೇಳಿದ್ದಾರೆ. ವರಿಷ್ಠರ ಗಮನಕ್ಕೆ ತಂದು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ ಎಂದರು.

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...