Thursday 19 August 2021

ಕಂಪ್ಯೂಟರ್ ಕಲಿಯದ ಸರ್ಕಾರಿ ನೌಕರರಿಗೆ ಬಿಗ್ ಶಾಕ್: ವೇತನ ಬಡ್ತಿಗೆ ತಡೆ.

ಬೆಂಗಳೂರು: ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಜ್ಞಾನ ತಿಳಿದಿಲ್ಲವಾದರೆ ಬಡ್ತಿಗೆ ತಡೆ ಬೀಳಲಿದೆ. ಸರ್ಕಾರಿ ನೌಕರರು ಕಂಪ್ಯೂಟರ್ ಪರೀಕ್ಷೆಯಲ್ಲಿ ಪಾಸಾಗಬೇಕು. ಇಲ್ಲವಾದರೆ ವಾರ್ಷಿಕ ವೇತನ ಬಡ್ತಿಗೆ ತಡೆ ನೀಡಲಾಗುತ್ತದೆ ಎನ್ನಲಾಗಿದೆ.

ರಾಜ್ಯ ಸರ್ಕಾರದಿಂದ ನೇರ ನೇಮಕಾತಿ ಮತ್ತು ಸೇವಾ ನಿರತ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ನೌಕರರು ಪರೀಕ್ಷೆಯಲ್ಲಿ ನಿಗದಿತ ಅಂಕಗಳನ್ನು ಪಡೆದು ಪಾಸಾಗಿರಬೇಕು. 2022ರ ಮಾರ್ಚ್ 22 ರ ಒಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸಾಗಬೇಕು. ಫೇಲಾದ ನೌಕರರು ವಾರ್ಷಿಕ ವೇತನ ಬಡ್ತಿ, ಬಡ್ತಿ ಮತ್ತು ಪರಿವೀಕ್ಷಣಾ ಅವಧಿ ಪಡೆಯಲು ಅರ್ಹರಾಗಿರುತ್ತಾರೆ ಎಂದು ಹೇಳಲಾಗಿದೆ.

ನಿರ್ದಿಷ್ಟಪಡಿಸಲಾದ ಹುದ್ದೆಗಳ ಹೊರತಾಗಿ ಎಲ್ಲಾ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಪರೀಕ್ಷೆ ಕಡ್ಡಾಯವಾಗಿದೆ. ಸರ್ಕಾರದ ಅನುಮೋದಿತ ಕಿಯೋನಿಕ್ಸ್ ಸಂಸ್ಥೆಯ ಮೂಲಕ ಪರೀಕ್ಷೆ ನಡೆಸಲಾಗುವುದು ಎನ್ನಲಾಗಿದೆ.

No comments:

Post a Comment