Thursday 19 August 2021

'KPSC' ಯಿಂದ ವಿವಿಧ ಹುದ್ದೆಗಳ ನೇಮಕಾತಿಯ ಅಂತಿಮ/ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ.



ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ಅಂತಿಮ/ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿದೆ.

ಈ ಬಗ್ಗೆ ರಾಜ್ಯ ಸರ್ಕಾರದ ಕಾರ್ಯದರ್ಶಿ ಜಿ ಸತ್ಯವತಿ ಆದೇಶ ಹೊರಡಿಸಿದ್ದು, ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ಅಂತಿಮ/ತಾತ್ಕಾಲಿಕ ಆಯ್ಕೆಪಟ್ಟಿಗಳನ್ನು ಲೋಕಸೇವಾ ಆಯೋಗ ಪ್ರಕಟಿಸಿದೆ. ಆಯ್ಕೆಯಾದ ಅಭ್ಯರ್ಥಿಗಳ ಮಾಹಿತಿಯನ್ನು ಆಯೋಗದ ವೆಬ್ ಸೈಟ್ http://kpsc.kar.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ತಾತ್ಕಾಲಿಕ ಆಯ್ಕೆಪಟ್ಟಿಗಳ ಕುರಿತು ಏನಾದರೂ ಆಕ್ಷೇಪಣೆಗಳಿದ್ದರೆ ಅಧಿಸೂಚನೆ ಪ್ರಕಟಿಸಿದ 7 ದಿನದೊಳಗಾಗಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ , ಬೆಂಗಳೂರು -560001 ಇವರಿಗೆ ಹುದ್ದೆಯ ಹೆಸರನ್ನು ಸ್ಪಷ್ಟವಾಗಿ ನಮೂದಿಸಿ ಲಿಖಿತ ರೂಪದಲ್ಲಿ ಸಲ್ಲಿಸಲು ಸೂಚಿಸಲಾಗಿದೆ. ಕೊನೆಯ ದಿನಾಂಕದ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.



No comments:

Post a Comment