ಬೆಳಗಾವಿ: ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚುತ್ತಿರುವುದರಿಂದ ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸಲಾಗಿದ್ದು , ಸಾರ್ವಜನಿಕರು ಸಹಕಾರ ಕೊಟ್ಟರೆ ಲಾಕ್‌ಡೌನ್ ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿಕೆ ನೀಡಿದ್ದಾರೆ. ಬೆಳಗಾವಿ ವಿಮಾಣ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು , ಮುಂಬೈ ಮಾದರಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲು ನಾಳೆ ಅಥವಾ ನಾಡಿದ್ದು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಬೆಂಗಳೂರಿನಲ್ಲಿ ಸಭೆ ನಡೆಸಿ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು. ಈಗಿರುವ ನೈಟ್ ಕರ್ಪ್ಯೂ ಮುಂದುವರಿಸುವ ಬಗ್ಗೆಯೂ ಚರ್ಚಿಸಲಾಗುವುದು ಎಂದು ಮಾಹಿತಿ ನೀಡಿದರು. ಕಳೆದ ಒಂದು ವಾರದಲ್ಲಿ ಇಡೀ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ವಿಶೇಷವಾಗಿ ಮಹಾರಾಷ್ಟ್ರದ ಮುಂಬೈನಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ವ್ಯಾಪಿಸುತ್ತಿದೆ. ಕೋವಿಡ್ ಯಾವ ರೀತಿ ಹರಡುತ್ತಿದೆ ಎಂಬುದನ್ನು ಗಮನಿಸುತ್ತಿದ್ದೇವೆ. ಬೆಂಗಳೂರಿನಲ್ಲೂ ದೊಡ್ಡ ಪ್ರಮಾಣದಲ್ಲಿ ಸೋಂಕು ಹರಡುತ್ತಿದೆ. ಸಚಿವ ಆರ್. ಅಶೋಕ ಲಾಕ್‌ಡೌನ್ ಬಗ್ಗೆ ಮಾತನಾಡಿದ್ದಾರೆ. ನಮ್ಮ ನಿಲುವು ಬಹಳ ಸ್ಪಷ್ಟ ಇದೆ. ಹಿಂದೆಲ್ಲ ಲಾಕ್‌ಡೌನ್ ಆಗಿತ್ತು. ಅದು ಆಗಬಾರದು ಅಂತ ಈಗ ಕಟ್ಟುನಿಟ್ಟಿನ ತೀರ್ಮಾನ ಕೈಗೊಂಡಿದ್ದೇವೆ. ಆರ್. ಅಶೋಕ ಹೇಳಿದ ಅರ್ಥವೇ ಅದು. ಜನರು ಅದಕ್ಕೆ ಸಹಕಾರ ಕೊಟ್ಟರೆ ಲಾಕ್‌ಡೌನ್ ಆಗುವುದಿಲ್ಲ ಎಂದ...