Sunday, 2 January 2022

ನಾಳೆಯಿಂದ ರಾಜ್ಯದಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೊರೋನಾ ಲಸಿಕೆ

 

ಬೆಂಗಳೂರು: ನಾಳೆಯಿಂದ ರಾಜ್ಯದಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೊರೋನಾ ಲಸಿಕೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಲಸಿಕೆ ಹಾಕಿಸಿಕೊಂಡ ಮಕ್ಕಳಿಗೆ ಮರುದಿನ ರಜೆ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಶಾಲೆಗಳಲ್ಲಿ ಮೊದಲ ದಿನ 50 ವಿದ್ಯಾರ್ಥಿಗಳಿಗೆ ಮಾತ್ರ ಕೋವಿಡ್ ಲಸಿಕೆ ನೀಡಲಾಗುತ್ತದೆ.

ಮಕ್ಕಳಿಗೆ ಲಸಿಕೆ ನೀಡುವ ಸಂದರ್ಭದಲ್ಲಿ ಶಾಲೆಯ ಬಳಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಮಕ್ಕಳಿಗೆ ಲಸಿಕೆ ಹಾಕಿಸಲು ವಾಕ್ -ಇನ್ ನೋಂದಣಿ ಪಡೆಯಬಹುದು ಇಲ್ಲವೇ ಈಗಾಗಲೇ ಪ್ರಾರಂಭಿಸಲಾಗಿರುವ ಕೋ-ವಿನ್ ಆಪ್ ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ಆಧಾರ್ ಮತ್ತು ಇತರ ರಾಷ್ಟ್ರೀಯ ಗುರುತಿನ ಚೀಟಿಗಳಿಲ್ಲದ ಮಕ್ಕಳು ತಮ್ಮ 10ನೇ ತರಗತಿಯ ಗುರುತಿನ ಚೀಟಿಯನ್ನು ನೋಂದಣಿಗಾಗಿ ಬಳಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿರುವ ದೇಶಿಯ ಕೋವಾಕ್ಸಿನ್ ಲಸಿಕೆಯನ್ನು 15 ರಿಂದ 18 ವರ್ಷ ವಯೋಮಾನದ ಮಕ್ಕಳಿಗೆ ನೀಡಲಾಗುವುದು, ಮೊದಲ ಡೋಸ್ ಲಸಿಕೆ ನೀಡಿದ 28 ದಿನಗಳ ಬಳಿಕ ಎರಡನೇ ಡೋಸ್ ಲಸಿಕೆ ನೀಡಲಾಗುವುದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

No comments:

Post a Comment