ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ (T20 World Cup) ಆರಂಭಕ್ಕೆ 20 ದಿನಗಳಿಗಿಂತ ಕಡಿಮೆ ಸಮಯ ಉಳಿದಿದೆ. ಟೀಂ ಇಂಡಿಯಾ (Team India ) ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 23 ರಂದು ಆಡಲಿದ್ದು, ಅದಕ್ಕೂ ಮೊದಲು ಜಸ್ಪ್ರೀತ್ ಬುಮ್ರಾ (Jasprit Bumrah) ಗಾಯಗೊಂಡಿರುವುದು ತಂಡದ ತಲೆನೋವನ್ನು ಹೆಚ್ಚಿಸಿದೆ. ಹೀಗಾಗಿ ಬುಮ್ರಾ ವಿಶ್ವಕಪ್ನಿಂದ ಹೊರಗುಳಿಯುತ್ತಾರೆ ಎಂಬ ವರದಿಗಳು ಈಗಾಗಲೇ ಹರಿದಾಡುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ಬುಮ್ರಾ ವಿಶ್ವಕಪ್‌ಗೂ ಮುನ್ನ ಚೇತರಿಸಿಕೊಳ್ಳಬಹುದೇ ಎಂಬ ಪ್ರಶ್ನೆ ಮೂಡಿದೆ. ಹೀಗಾಗಿ ಜಾಣ್ಮೆಯ ನಡೆ ಅನುಸರಿಸುತ್ತಿರುವ ಬಿಸಿಸಿಐ ಬುಮ್ರಾರನ್ನು ಟೀಂ ಇಂಡಿಯಾ ಜೊತೆ ಆಸ್ಟ್ರೇಲಿಯಾಕ್ಕೆ ಕಳುಹಿಸಲು ಸಿದ್ದತೆ ನಡೆಸಿದೆ ಎಂದು ವರದಿಯಾಗಿದೆ. ಬುಮ್ರಾ ವಿಶ್ವಕಪ್‌ನಲ್ಲಿ ಆಡುವುದಿಲ್ಲ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಇನ್ನೂ ಅಧಿಕೃತವಾಗಿ ಘೋಷಿಸಿಲ್ಲ. ಆದಾಗ್ಯೂ, ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಯ ಉಳಿದ ಎರಡು ಪಂದ್ಯಗಳನ್ನು ಆಡಲು ಅವರಿಗೆ ಸಾಧ್ಯವಾಗುವುದಿಲ್ಲ ಎಂದು ಮಂಡಳಿಯು ಶುಕ್ರವಾರ ಬೆಳಿಗ್ಗೆ ತಿಳಿಸಿದೆ. ಅಲ್ಲದೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ವೈದ್ಯಕೀಯ ತಜ್ಞರು ಅವರನ್ನು ಪರೀಕ್ಷಿಸುತ್ತಿದ್ದು, ಆನಂತರವೇ ಬಿಸಿಸಿಐ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತದೆ. ತಂಡದ ಜೊತೆ ಆಸ್ಟ್ರೇಲಿಯಾಕ್ಕೆ ಹಾರಲಿರುವ ಬುಮ್ರಾ ವಿಶ್ವಕಪ್‌ಗೆ ಮುನ್ನವೇ ಬುಮ್ರಾ ಈ ಸಮಸ್ಯೆಯಿಂದ ...