ಬೆಂಗಳೂರು: ನಂದಿನಿ ಹಾಲಿನ ಮಾರಾಟ ದರವನ್ನು ಲೀಟರಿಗೆ 3ರೂ. ಹೆಚ್ಚಿಸಲು ರಾಜ್ಯ ಹಾಲು ಮಹಾ ಮಂಡಳಿ (ಕೆಎಂಎಫ್) ನಿರ್ಧರಿಸಿದೆ. ವಾರ್ಷಿಕ ಸಭೆಯಲ್ಲಿ ಹಾಲಿನ ಮಾರಾಟ ದರ ಹೆಚ್ಚಿಸುವ ಸಂಬಂಧ ಸರ್ವಾನುಮತದ ನಿರ್ಣಯ ಅಂಗೀಕರಿಸಲಾಗಿದೆ.
ಸಭೆಯಲ್ಲಿ ಪಾಲ್ಗೊಂಡಿದ್ದ ರಾಜ್ಯದ 14 ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ದರ ಏರಿಕೆಗೆ ಒಲವು ವ್ಯಕ್ತಪಡಿಸಿದ್ದಾರೆ. ಎಂದು ಕೆಎಂಎಫ್ ನ ಉನ್ನತ ಮೂಲಗಳು ತಿಳಿಸಿವೆ. ರಾಜ್ಯದ ಎಲ್ಲಾ ಹಾಲು ಒಕ್ಕೂಟಗಳ ಹಾಲು ಮಾರಾಟ ದರ ಹೆಚ್ಚಿಸುವಂತೆ ಕಳೆದ 8 ತಿಂಗಳಿಂದ ಕೆಎಂಎಫ್ ಮೇಲೆ ಒತ್ತಡ ಹೇಳುತ್ತಿವೆ. ಈ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದ್ದರು ಮುಖ್ಯಮಂತ್ರಿಗಳಾದ ಸೂಕ್ತ ಸ್ಪಂದನೆ ಸಿಕ್ಕಿಲ್ಲ. ರೈತರ ಅನುಕೂಲಕ್ಕಾಗಿ ಶೀಘ್ರವೇ ಹಾಲು ಮಾರಾಟ ದರದಲ್ಲಿ ಲೀಟರ್ ಗೆ 3 ರೂ ಹೆಚ್ಚಳ ಮಾಡಲೇಬೇಕು. ಬೆಲೆ ಹೆಚ್ಚಳದ ಸಂಪೂರ್ಣ ಲಾಭವನ್ನು ರೈತರಿಗೆ ತಿಳಿಸುತಲುಪಿಸಬೇಕೆಂದು ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬದಲಾಯಿತು ಎಂದು ಮೂಲಗಳು ಹೇಳಿವೆ. ಈ ಕುರಿತು ಸರಕಾರದ ಅನುಮತಿ ಬಾಕಿ ಇದೆ.
Comments
Post a Comment