ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಯ ಫಲಿತಾಂಶ ಹೊರಬಂದು ಭರ್ಜರಿಯಾಗಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಗೆಲುವು ಸಾಧಿಸಿದ್ದಾರೆ. ಸುಮಾರು 6 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಖರ್ಗೆ ಅವರು ಗೆಲುವು ಸಾಧಿಸಿದ್ದಾರೆ. ಖರ್ಗೆ ಅವರು ಗೆದ್ದ ಬಳಿಕ ಕಲಬುರಗಿ ಸೇರಿದಂತೆ ಇತರೆ ಜಿಲ್ಲೆಗಳ ಕಾರ್ಯಕರ್ತರು ಸಂಭ್ರಾಮಚರಣೆ ನಡೆಸಿದ್ದಾರೆ.
ಇನ್ನು ಅಧ್ಯಕ್ಷ ಸ್ಥಾನಕ್ಕೆ ಖರ್ಗೆ ಅವರು ಏರಿದ ಬಳಿಕ ಸೋನಿಯಾ ಗಾಂಧಿ ಭೇಟಿ ಚರ್ಚೆಗೆ ಕಾರಣವಾಗಿದೆ. ಪಕ್ಷದಲ್ಲಿ ಏನೇ ಕಾರ್ಯಕ್ರಮ ಆಗಲಿ, ಮತ್ತೊಂದು ಏನೇ ಬೆಳವಣಿಗೆ ನಡೆಯಲಿ. ಎಲ್ಲಾ ಸಂಸದರು, ಶಾಸಕರು ಸೋನಿಯಾ ಗಾಂಧಿಯನ್ನು ಭೇಟಿ ಮಾಡಲು ಅವರ ನಿವಾಸಕ್ಕೆ ಹೋಗುತ್ತಿದ್ದರು. ಆದರೆ ಇದೇ ಮೊದಲ ಬಾರಿಗೆ ಸೋನಿಯಾ ಗಾಂಧಿ ಅವರೆ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ಈ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಹಿರಿಯರು. ಅವರಿಗೆ ಗೌರವ ಕೊಡಬೇಕಾದದ್ದು ನಮ್ಮೆಲ್ಲರ ಕರ್ತವ್ಯ ಎಂಬ ಸಂದೇಶವನನು ಸಾರಿದ್ದಾರೆ ಎನ್ನಲಾಗಿದೆ. ಸೋನಿಯಾ ಗಾಂಧಿ ಅವರ ಜೊತೆಗೆ ಪ್ರಿಯಾಂಕ ಗಾಂಧಿ ಕೂಡ ಜೊತೆಯಲ್ಲಿದ್ದರು. ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ್ ಖರ್ಗೆ ಅವರಿಗೆ ಸ್ವಾಗತ ಕೋರಿದರು.
The post ಮಲ್ಲಿಕಾರ್ಜುನ ಖರ್ಗೆ ಮನೆಗೆ ಸೋನಿಯಾ ಗಾಂಧಿ ಭೇಟಿ : ಕೊಟ್ಟ ಸಂದೇಶವೇನು..? first appeared on Kannada News | suddione.
source https://suddione.com/sonia-gandhi-meet-congress-prez-elect-mallikarjun-kharge/
No comments:
Post a Comment