Friday, 21 October 2022

ದೀಪಾವಳಿಗೆ ಅಯೋಧ್ಯೆಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

ಸುದ್ದಿಒನ್ ವೆಬ್ ಡೆಸ್ಕ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ದೀಪಾವಳಿಯ ಮುನ್ನಾದಿನದಂದು ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡಲಿದ್ದು, ರಾಮಮಂದಿರದಲ್ಲಿ ದರ್ಶನ ಮತ್ತು ಪೂಜೆ ಸಲ್ಲಿಸಲಿದ್ದಾರೆ.

ಪ್ರಧಾನಿ ಕಾರ್ಯಾಲಯ (PMO) ಹೊರಡಿಸಿದ ಹೇಳಿಕೆಯ ಪ್ರಕಾರ, ಮೋದಿ ಅವರು ಭವ್ಯವಾದ ರಾಮಮಂದಿರದ ನಿರ್ಮಾಣ ಸ್ಥಳವನ್ನು ಪರಿಶೀಲಿಸುತ್ತಾರೆ ಮತ್ತು ನಂತರ ಶ್ರೀರಾಮನ ಸಾಂಕೇತಿಕ ಪಟ್ಟಾಭಿಷೇಕವನ್ನು ಮಾಡುತ್ತಾರೆ.

ಸಂಜೆ 6.30 ರ ಸುಮಾರಿಗೆ, ಸರಯು ನದಿಯ ದಡದಲ್ಲಿ ಪ್ರಧಾನ ಮಂತ್ರಿಗಳು
“ಆರತಿ” ದೀಪೋತ್ಸವ ಕಾರ್ಯಕ್ರಮಕ್ಕೆ
ಸಾಕ್ಷಿಯಾಗಲಿದ್ದಾರೆ.

ದೀಪೋತ್ಸವದ ಆರನೇ  ವಾರ್ಷಿಕೋತ್ಸವದ ಅಂಗವಾಗಿ ಇದೇ ಮೊದಲ ಬಾರಿಗೆ ಮೋದಿ ಅವರು ಸಂಭ್ರಮಾಚರಣೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಪಿಎಂಒ ತಿಳಿಸಿದೆ.

The post ದೀಪಾವಳಿಗೆ ಅಯೋಧ್ಯೆಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ first appeared on Kannada News | suddione.



source https://suddione.com/pm-modi-to-visit-ayodhya-on-diwali-eve/

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...