ಕಲಬುರಗಿ: ಇತ್ತಿಚೆಗೆ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ ಎಂದು ಬಿಜೆಪಿ ಮುಖಂಡ ಅರವಿಂದ್ ಚೌವ್ಹಾಣ್ ಪೋಸ್ಟರ್ ಅಂಟಿಸಿದ್ದರು. ಇದೇ ವಿಚಾರಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲಿಗರ ನಡುವೆ ಗಲಾಟೆ ಸಹ ಆಗಿತ್ತು. ಇದೀಗ ಶಾಸಕ ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರಿಗೆ ವಾರ್ನಿಂಗ್ ನೀಡಿದ್ದಾರೆ.
ವಾಡಿ ಪಟ್ಟಣದಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಶಾಸಕ ಪ್ರಿಯಾಂಕ್ ಖರ್ಗೆ ಚಾಲನೆ ನೀಡಿದ್ದರು. ಈ ವೇಳೆ ಜನರನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಯಕರ್ತರನ್ನು ಕೆಣಕಿದರೆ ಸುಮ್ಮನೆ ಇರುವುದಿಲ್ಲ. ನಾವೂ ಮನಸ್ಸು ಮಾಡಿದರೆ ಒಬ್ಬನೇ ಒಬ್ಬ ಬಿಜೆಪಿ ಮುಖಂಡನನ್ನು ಓಡಾಡುವುದಕ್ಕೆ ಬಿಡುವುದಿಲ್ಲ. ಬಿಜೆಪಿಯವರು ಚಿತ್ತಾಪುರದ ವಾತಾವರಣವನ್ನೇ ಹಾಳು ಮಾಡುತ್ತಿದ್ದಾರೆ ಎಂದು ಕಾರ್ಯಕ್ರಮದಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.
The post ಕಾಂಗ್ರೆಸ್ ಕಾರ್ಯಕರ್ತರನ್ನು ಕೆಣಕಿದರೆ ಸುಮ್ಮನೆ ಇರಲ್ಲ : ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ first appeared on Kannada News | suddione.
source https://suddione.com/harassment-of-congress-workers-priyank-kharge-warns-bjp/
No comments:
Post a Comment