Monday, 28 November 2022

ಭಾರತ್ ಜೋಡೋ ಯಾತ್ರೆಯಲ್ಲಿ ನೂಕು ನುಗ್ಗಲು : ಕೈಮುರಿದುಕೊಂಡ ವೇಣುಗೋಪಾಲ್

 

ಭೋಪಾಲ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ನಡೆಯುತ್ತಿದೆ. ಈ ಯಾತ್ರೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಕೂಡ ಭಾಗಿಯಾಗಿದ್ದಾರೆ. ಸದ್ಯಕ್ಕೆ ಯಾತ್ರೆ ಮಧ್ಯಪ್ರದೇಶದಲ್ಲಿ ಸಾಗುತ್ತಿದೆ. ಈ ವೇಳೆ ರಾಹುಲ್ ಗಾಂಧಿಯನ್ನು ನೋಡುವುದಕ್ಕೆ ಜನ ಜಂಗುಳಿ ಉಂಟಾಗಿದ್ದು, ಈ ಜನಜಂಗುಳಿ ನಡುವೆ ವೇಣುಗೋಪಾಲ್ ಕೈ ಮುರಿದುಕೊಂಡಿದ್ದಾರೆ.

ರಾಹುಲ್ ಗಾಂಧಿಯನ್ನು ನೋಡಲು, ಮಾತನಾಡಿಸಲು, ಫೋಟೋ ತೆಗೆಸಿಕೊಳ್ಳಲು ಅಭಿಮಾನಿಗಳು ನುಗ್ಗಿದ್ದಾರೆ. ಜೊತೆಯಲ್ಲಿಯೇ ಇದ್ದ ವೇಣುಗೋಪಾಲ್ ಅವರನ್ನು ತಳ್ಳಿಕೊಂಡು ಹೋಗಿದ್ದಾರೆ. ಇದರ ಪರಿಣಾಮ ಕೆಳಗೆ ಬಿದ್ದಿದ್ದು, ಮೊಕಾಲು ಹಾಗೂ ಕೈಗೆ ಗಾಯವಾಗಿದೆ.

ತಕ್ಷಣ ಜೊತೆಯಲ್ಲಿಯೇ ಇದ್ದ ವೈದ್ಯರು ಪರೀಕ್ಷಿಸಿದ್ದಾರೆ. ಈ ವೇಳೆ ಮೂಳೆ ಫ್ರಾಕ್ಚರ್ ಆಗಿರುವುದು ಗಮನಕ್ಕೆ ಬಂದಿದೆ‌ ಕೂಡಲೇ ವೈದ್ಯರು ಗಮನ ಹರಿಸಿ ಚಿಕಿತ್ಸೆ ನೀಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 2023ರ ಚುನಾವಣೆಯನ್ನು ಗಂಭೀರವಾಗಿ ಪರಿಗಣನೆಗೆ ತೆಗೆದುಕೊಂಡಿದ್ದು, ಅಧಿಕಾರಕ್ಕೆ ಪಕ್ಷವನ್ನು ಮತ್ತೆ ತರಬೇಕು ಅಂತ ಪಣ ತೊಟ್ಟಿದ್ದಾರೆ. ಅದರ ಫಲವಾಗಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿದ್ದಾರೆ.

The post ಭಾರತ್ ಜೋಡೋ ಯಾತ್ರೆಯಲ್ಲಿ ನೂಕು ನುಗ್ಗಲು : ಕೈಮುರಿದುಕೊಂಡ ವೇಣುಗೋಪಾಲ್ first appeared on Kannada News | suddione.



source https://suddione.com/congress-general-secretary-kc-venugopal-injured-during-bharat-jodo-stampede-in-madhya-pradesh/

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...