Tuesday, 8 November 2022

ಒವೈಸಿ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ಮೇಲೆ ಕಲ್ಲು ತೂರಾಟ

ಗುಜರಾತ್: ವಿಧಾನಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪ್ರಚಾರದ ಕಾರ್ಯ ಜೋರಾಗಿ ನಡೆಯುತ್ತಿದೆ. ಆಡಳಿತರೂಢ ಬಿಜೆಪಿ, ಎಎಪಿ, ಕಾಂಗ್ರೆಸ್ ಭರ್ಜರಿ ಪ್ರಚಾರಕ್ಕೆ ಶುರು ಮಾಡಿದ. ಅದರ ಜೊತೆಗೆ ಇದೀಗ ಎಐಎಂಐಎಂ ಪಕ್ಷ ಕೂಡ ಮುಂದಾಗಿದೆ.

ಎಐಎಂಐಎಂ ಪಕ್ಷದ ಮುಖ್ಯಸ್ಥ ಒವೈಸಿ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಕಳೆದೊಂದು ತಿಂಗಳಿನಿಂದಾನು ಪ್ರಚಾರ ಕಾರ್ಯದಲ್ಲಿ ತೊಡಗಿದೆ. ಇದೀಗ ಅವರು ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ಟ್ರೈನ್ ಕಲ್ಲು ತೂರಾಟ ನಡೆದಿದೆ. ಅಸಾದುದ್ದೀನ್ ಒವೈಸಿ ಕುಳಿತಿದ್ದ ಕಿಟಕಿಯ ಪಕ್ಕದಲ್ಲಿಯೇ ಕಲ್ಲು ತೂರಾಟ ನಡೆಸಿದ್ದು, ಗಾಜು ಪುಡಿ ಪುಡಿಯಾಗಿದೆ.

ಈ ಸಂಬಂಧ ಎಐಎಂಐಎಂ ಪಕ್ಷ ತಮ್ಮ ಟ್ವಿಟರ್ ಖಾತೆಯಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇನ್ನು ಗುಜರಾತ್ ಚುನಾವಣೆ ಎರಡು ಹಂತದಲ್ಲಿ ನಡೆಯಲಿದೆ. ಡಿಸೆಂಬರ್ 1 ಮತ್ತು ಡಿಸೆಂಬರ್ 5‌ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ಕ್ಕೆ ಫಲಿತಾಂಶ ಹೊರಬೀಳಲಿದೆ.

The post ಒವೈಸಿ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ಮೇಲೆ ಕಲ್ಲು ತೂರಾಟ first appeared on Kannada News | suddione.



source https://suddione.com/stones-thrown-at-vande-bharat-coach/

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...