Tuesday, 1 November 2022

LPG Cylinder Price: ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಇಳಿಕೆ..!

ನವದೆಹಲಿ : ದೇಶಾದ್ಯಂತ 19 ಕೆಜಿಯ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 115.50 ರೂ ಕಡಿತಗೊಳಿಸಲಾಗಿದೆ . ಇಳಿಕೆಯಾದ ಬೆಲೆ ಮಂಗಳವಾರದಿಂದ (ನವೆಂಬರ್ 1 ರಿಂದ) ಜಾರಿಗೆ ಬರಲಿದೆ .

ಈ ಬೆಲೆ ಕಡಿತದಿಂದ, ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗೆ ಈಗ 1,744 ರೂಪಾಯಿಗಳನ್ನು ಪಾವತಿಸಬೇಕಾಗುತ್ತದೆ.

ಈ ಹಿಂದೆ ದೆಹಲಿಯಲ್ಲಿ ಇದರ ಬೆಲೆ 1,859.50 ರೂ. ಗಳಷ್ಟಿತ್ತು.

ಮುಂಬೈನಲ್ಲಿ 19 ಕಿಲೋಗ್ರಾಂಗಳ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 1,696 ರೂ.
ಅದೇ ರೀತಿ, ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ LPG ಸಿಲಿಂಡರ್ ಬೆಲೆ 1,846 ರೂ. ಚೆನ್ನೈನಲ್ಲಿ 19 ಕೆಜಿ ಸಿಲಿಂಡರ್‌ಗೆ 1,893 ರೂ.ಗಳಷ್ಟಾಗಿದೆ.

ಇದಕ್ಕೂ ಮುನ್ನ ಅಕ್ಟೋಬರ್ 1 ರಂದು, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ರೂ 25.50 ಗಳಷ್ಟು ಕಡಿತಗೊಳಿಸಲಾಗಿತ್ತು.

ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ದರದಲ್ಲಿ (14.2 ಕೆಜಿ ಸಿಲಿಂಡರ್) ಯಾವುದೇ ಬದಲಾವಣೆಯಾಗಿಲ್ಲ.

ಜುಲೈ ತಿಂಗಳಿನಲ್ಲಿ ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಲಾಗಿತ್ತು. ಜುಲೈ 6 ರಂದು 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 50 ರೂಪಾಯಿಗಳಷ್ಟು ಹೆಚ್ಚಿಸಲಾಗಿತ್ತು.

The post LPG Cylinder Price: ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಇಳಿಕೆ..! first appeared on Kannada News | suddione.



source https://suddione.com/lpg-gas-cylinder-price-today-commercial-cooking-gas-price-cut-by-rs-115-50/

No comments:

Post a Comment

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...