ಟೀಂ ಇಂಡಿಯಾ ವಿರುದ್ಧ ಅಮೋಘ ಪ್ರದರ್ಶನ ನೀಡಿ ಏಕದಿನ ಸರಣಿ ಗೆದ್ದಿದ್ದ ಬಾಂಗ್ಲಾದೇಶ (India and Bangladesh) ತಂಡ ಟೆಸ್ಟ್ ಸರಣಿಯಲ್ಲಿ ಮುಗ್ಗರಿಸಿದೆ. ಚಟ್ಟೋಗ್ರಾಮ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಬಾಂಗ್ಲಾದೇಶ ಎರಡನೇ ದಿನದಾಟದ ಅಂತ್ಯಕ್ಕೆ ಕೇವಲ 133 ರನ್‌ಗಳಿಗೆ ತನ್ನ 8 ವಿಕೆಟ್‌ಗಳನ್ನು ಕಳೆದುಕೊಂಡಿದೆ. ಬಾಂಗ್ಲಾದೇಶದ ಬ್ಯಾಟ್ಸ್‌ಮನ್‌ಗಳಿಗೆ ಚಳ್ಳೆ ಹಣ್ಣು ತಿನ್ನಿಸಿದ ಸಿರಾಜ್ (Mohammed Siraj) ಹಾಗೂ ಕುಲ್ದೀಪ್ ಯಾದವ್ ಭಾರತಕ್ಕೆ ಇನ್ನಿಂಗ್ಸ್ ಮುನ್ನಡೆ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಬಾಂಗ್ಲಾ ಪರ ಉರುಳಿರುವ 8 ವಿಕೆಟ್ಗಳಲ್ಲಿ ಕುಲ್ದೀಪ್ ಯಾದವ್ (Kuldeep Yadav) 10 ಓವರ್‌ಗಳಲ್ಲಿ 33 ರನ್ ನೀಡಿ 4 ವಿಕೆಟ್ ಕಬಳಿಸಿದರೆ, ಸಿರಾಜ್ ಕೂಡ 3 ವಿಕೆಟ್ ಪಡೆದಿದ್ದಾರೆ. ಇನ್ನುಳಿದಂತೆ ಒಂದು ವಿಕೆಟ್ ಉಮೇಶ್ ಯಾದವ್ ಪಾಲಾಯಿತು. ಭಾರತದ ಬೌಲಿಂಗ್ ದಾಳಿಗೆ ನಲುಗಿದ ಬಾಂಗ್ಲಾದೇಶದ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚು ಹೊತ್ತು ವಿಕೆಟ್‌ನಲ್ಲಿ ಉಳಿಯಲು ಸಾಧ್ಯವಾಗಲಿಲ್ಲ. ತಂಡದ ಪರ ಇದುವರೆಗೆ ಮುಶ್ಫಿಕರ್ ರಹೀಮ್ ಗರಿಷ್ಠ 28 ರನ್ ಗಳಿಸಿದರೆ, ಲಿಟ್ಟನ್ ದಾಸ್ 24 ರನ್ ಗಳಿಸಿದರು. ಝಾಕಿರ್ ಹಸನ್ 20 ರನ್‌ಗಳ ಇನಿಂಗ್ಸ್ ಆಡಿದರು. ಇನ್ನುಳಿದಂತೆ 9ನೇ ವಿಕೆಟ್ಗೆ ಜೊತೆಯಾಗಿರುವ ಮೆಹದಿ ಹಸನ್ ಹಾಗೂ ಇಬಾದತ್ ಹುಸೇನ್ 3ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದಿರಿಸಿಕೊಂಡಿದ್ದಾರೆ. ಹಸನ್ 16 ರನ್ ಗಳಿಸಿದರೆ, ಇಬಾದತ್ 13 ರನ್ ಗಳ...