Showing posts with label Bengaluru. Show all posts
Showing posts with label Bengaluru. Show all posts

Thursday, 6 April 2023

"My stand is not for party but for uncle"- Kichcha Sudeep

Actor Kichcha Sudeep, who came to show support to Chief Minister Basavaraj Bommai, got into trouble by not answering the journalists' questions. He proved that he is an actor by changing his statement to campaign in the areas where he later indicated that he was supporting in trust.



  • At present, Sudeep has spoken as if he had put a lamp on the wall
  • I do not work for any party
  • My loving uncle stood by me in my difficult times

For the past three or four days, Sudeep has joined BJP. This time  there was a lot of talk about Sudeep  becoming an MLA. But today, Sudeep came to a press conference with the CM, and has put a lid on all that.

Currently, Sudeep has spoken like putting a lamp on the wall. I am not working for any party. My dear uncle stood by me in my difficult times. So I clearly say that I am not a party, I am standing for my dear uncle. I will go wherever he says and campaign.

On the other hand, CM Bommayi said, "He is a popular actor and we have decided on his campaign. Bommayi said that he will keep his fans in mind and promote it as long as it is convenient for him. Sudeep's arrival has given us great strength. I would like to thank his parents, Sanjeevanna and Sarovar. Therefore, we are keeping both their time and respect in mind. The CM said that the campaign will decide.

 Even though he will stand by Sudeep Mama, he has forgotten that CM Bommai is the legislative leader of the BJP party. Thus this move by Sudeepa and the news conference ended without any definite climax.

Source: https://zeenews.india.com/kannada/karnataka-assembly-election/my-stand-is-not-for-party-but-for-uncle-kiccha-sudeep-127078



Monday, 12 September 2022

ಹಾಲಿನ ದರ ಲೀಟರ್ ಗೆ ಮೂರು ರೂಪಾಯಿ ಹೆಚ್ಚಳ ಸಾಧ್ಯತೆ.

ಬೆಂಗಳೂರು: ನಂದಿನಿ ಹಾಲಿನ ಮಾರಾಟ ದರವನ್ನು ಲೀಟರಿಗೆ 3ರೂ.  ಹೆಚ್ಚಿಸಲು ರಾಜ್ಯ ಹಾಲು ಮಹಾ ಮಂಡಳಿ (ಕೆಎಂಎಫ್) ನಿರ್ಧರಿಸಿದೆ. ವಾರ್ಷಿಕ ಸಭೆಯಲ್ಲಿ ಹಾಲಿನ ಮಾರಾಟ ದರ ಹೆಚ್ಚಿಸುವ ಸಂಬಂಧ ಸರ್ವಾನುಮತದ ನಿರ್ಣಯ ಅಂಗೀಕರಿಸಲಾಗಿದೆ. 



ಸಭೆಯಲ್ಲಿ ಪಾಲ್ಗೊಂಡಿದ್ದ ರಾಜ್ಯದ 14 ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ದರ ಏರಿಕೆಗೆ ಒಲವು ವ್ಯಕ್ತಪಡಿಸಿದ್ದಾರೆ. ಎಂದು ಕೆಎಂಎಫ್ ನ ಉನ್ನತ ಮೂಲಗಳು ತಿಳಿಸಿವೆ. ರಾಜ್ಯದ ಎಲ್ಲಾ ಹಾಲು ಒಕ್ಕೂಟಗಳ ಹಾಲು ಮಾರಾಟ ದರ ಹೆಚ್ಚಿಸುವಂತೆ ಕಳೆದ 8 ತಿಂಗಳಿಂದ ಕೆಎಂಎಫ್ ಮೇಲೆ ಒತ್ತಡ ಹೇಳುತ್ತಿವೆ. ಈ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದ್ದರು ಮುಖ್ಯಮಂತ್ರಿಗಳಾದ ಸೂಕ್ತ ಸ್ಪಂದನೆ ಸಿಕ್ಕಿಲ್ಲ. ರೈತರ ಅನುಕೂಲಕ್ಕಾಗಿ ಶೀಘ್ರವೇ ಹಾಲು ಮಾರಾಟ ದರದಲ್ಲಿ ಲೀಟರ್ ಗೆ 3 ರೂ ಹೆಚ್ಚಳ ಮಾಡಲೇಬೇಕು. ಬೆಲೆ ಹೆಚ್ಚಳದ ಸಂಪೂರ್ಣ ಲಾಭವನ್ನು ರೈತರಿಗೆ ತಿಳಿಸುತಲುಪಿಸಬೇಕೆಂದು ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬದಲಾಯಿತು ಎಂದು ಮೂಲಗಳು ಹೇಳಿವೆ.  ಈ ಕುರಿತು ಸರಕಾರದ ಅನುಮತಿ ಬಾಕಿ ಇದೆ.

Thursday, 21 April 2022

2022-23 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕಾರ್ಯಸೂಚಿ ಪ್ರಕಟ

 

ಬೆಂಗಳೂರು:ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ,ಅನುದಾನಿತ ಹಾಗೂ ಅನುದಾನ ರಹಿತ  ಪ್ರಾಥಮಿಕ ಮತ್ತು ಪೌಢಶಾಲೆಗಳಿಗೆ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾಯೋಜನೆ.


ವಾರ್ಷಿಕ ಕ್ರಿಯಾ ಯೋಜನೆಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ

https://drive.google.com/file/d/1se1x6osq_NZxBiHZSD5DRXjpTpQWqsEZ/view?usp=sharing




Wednesday, 20 April 2022

ಏಪ್ರಿಲ್ 22 ರಿಂದ ಮೇ 18 ರ ವರೆಗೆ ದ್ವಿತೀಯ ಪಿಯು ಪರೀಕ್ಷೆಗೂ ಹಿಜಾಬ್ ಧರಿಸುವಂತಿಲ್ಲ.

 


ಬೆಂಗಳೂರು: ರಾಜ್ಯಾದ್ಯಂತ ಏಪ್ರಿಲ್ 22 ರಿಂದ ಆರಂಭವಾಗಲಿರುವ ದ್ವಿತೀಯ ಪಿಯು ಪರೀಕ್ಷೆಗೆ ಸರಕಾರ, ಹೈಕೋರ್ಟ್ನ ಆದೇಶದನ್ವಯ ಹಿಜಾಬ್ ಧರಿಸಿ ಬರುವಂತಿಲ್ಲ. ಕಡ್ಡಾಯವಾಗಿ ಸಮವಸ್ತ್ರದಲ್ಲೇ ಪರೀಕ್ಷೆಗೆ ಹಾಜರಾಗಬೇಕು.

“ಪರೀಕ್ಷಾ ಕಾರ್ಯಕ್ಕೆ ಹಾಜರಾಗುವ ಸಿಬ್ಬಂದಿ ಹಾಗೂ ಇತರೆ ಧಾರ್ಮಿಕ ಸಂಕೇತವುಳ್ಳ ವಸ್ತ್ರಗಳನ್ನು ಧರಿಸಿ ಪರೀಕ್ಷಾ ಕಾರ್ಯಕ್ಕೆ ಹಾಜರಾಗಲು ಅವಕಾಶವಿಲ್ಲ.” ಎಂದು ಪ್ರಾಥಮಿಕ ಮತ್ತು ಪೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ಸಮವಸ್ತ್ರ ನಿಯಮದಿಂದ ಪುನಾರಾವರ್ತಿತ ಮತ್ತು ಖಾಸಗಿ ಅಭ್ಯರ್ಥಿಗಳಿಗೆ ವಿನಾಯಿತಿ ನೀಡಲಾಗಿದೆ. ವಿದ್ಯಾರ್ಥಿಗಳು ಸರಕಾರ ಮತ್ತು ಹೈಕೋರ್ಟ್ ಆದೇಶ ಪಾಲನೆ ಮಾಡಬೇಕು. ಇತ್ತೀಚೆಗೆ ಪೂರ್ಣಗೊಂಡ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗೆ 14 ಜಿಲ್ಲೆಗಳಲ್ಲಿ ಇತರೆ ಧರ್ಮದ ಹೆಣ್ಣು ಮಕ್ಕಳಿಗೆ ಹೋಲಿಸಿದರೆ. ಮುಸ್ಲಿಂ ಧರ್ಮದ ಹೆಣ್ಣು ಮಕ್ಕಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅಂದರೆ ಶೇ 98 ರಷ್ಟು ಮಂದಿ ಹಾಜರಾಗಿದ್ದಾರೆ. ಹಾಗಾಗಿ ಹಿಜಾಬ್ ಒಂದು ಸಮಸ್ಯೆಯಲ್ಲ ಎಂದರು.

ಏಪ್ರಿಲ್ 22 ರಿಂದ ಮೇ 18 ರ ವರೆಗೆ ದ್ವಿತೀಯ ಪಿ.ಯು.ಸಿ.

 


ಬೆಂಗಳೂರು; ಏಪ್ರಿಲ್ 22 ರಿಂದ 18 ರ ವರೆಗೆ ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಎಂದು ಪ್ರಾಥಮಿಕ ಮತ್ತು ಪೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.

ಒಟ್ಟು 6.84 ಲಕ್ಷ ವಿದ್ಯಾರ್ಥಿ: ಈ ಭಾರಿ 3,46,936 ಬಾಲಕರು, 3,37,319 ಬಾಲಕಿಯರು ಸೇರಿದಂತೆ ಒಟ್ಟು 6,84,255. ವಿದ್ಯಾರ್ಥಿಗಳು ಪರೀಕ್ಷಗೆ ನೋಂದಣಿ ಮಾಡಿಕೊಂಡಿದ್ದಾರೆ.ಇದರಲ್ಲಿ 6,00,519 ಹೊಸ ಅಭ್ಯರ್ಥಿಗಳು, 61,808 ಪುನರಾವರ್ತಿತ ಹಾಗೂ 21,928 ಮಂದಿ ಖಾಸಗಿ ಅಭ್ಯರ್ಥಿಗಳಿದ್ದಾರೆ. ಕಲಾ ವಿಭಾಗದ 2,28,167 ವಾಣಿಜ್ಯ ವಿಭಾಗದ 2,45,519, ವಿಜ್ಞಾನ ವಿಭಾಗದ 2,10,569 ವಿದ್ಯಾರ್ಥಿಗಳು 2,212 ಮಂದಿ ವಿಶೇಷಚೇತನರು ಪರೀಕ್ಷೆ ಬರೆಯಲಿದ್ದಾರೆ ಎಂದರು.

ಪರೀಕ್ಷಾ ಅಕ್ರಮ ತಡೆಯಲು 2152 ವಿಶೇಷ ಜಾಗೃತ ದಳ, 858 ತಾಲೂಕು ಜಾಗೃತಚ ದಳ ಹಾಗೂ 64 ಜಿಲ್ಲಾ ಜಾಗೃತ ದಳಗಳನ್ನು ರಚನೆ ಮಾಡಾಗಿದೆ. ಪರೀಕ್ಷಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷೆ ದಿನಗಳಂದು ತಮ್ಮ ಪ್ರವೇಶ ಪತ್ರ ತೋರಿಸಿ  ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ಇತರೆ ಸಾರಿಗೆ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಸಾರಿಗೆ ಇಲಾಖೆ ಅವಕಾಶ ಕಲ್ಪಿಸಿದೆ.

ಈ ಬಾರಿ ಹಾಸನ, ತುಮಕೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಹೊಸದಾಗಿ ಮೌಲ್ಯಮಾಪನ ಕೇಂದ್ರಗಳನ್ನು ತೆರೆಯಲಾಗುವುದು, ಒಟ್ಟು 81 ಕೇಂದ್ರಗಳಲ್ಲಿ ದ್ವಿತೀಯ ಪಿಯು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ, ಎಂದು ತಿಳಿಸಿದರು.

Saturday, 25 December 2021

ಹಳೇ ಪದ್ಧತಿಯಂತೆ ಮೇನಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಸಲು ಚಿಂತನೆ


 ಬೆಂಗಳೂರು, ಡಿ. 25: ಕರ್ನಾಟಕ ರಾಜ್ಯದಲ್ಲಿ 2021-22 ನೇ ಸಾಲಿನ ಎಸ್‌ಎಸ್‌ಎಲ್ ಸಿ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳ ನೋಂದಣಿ ಪ್ರಕ್ರಿಯೆ ದಿನಾಂಕ ವಿಸ್ತರಣೆ ಮಾಡಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಧಿಸೂಚನೆ ಹೊರಡಿಸಿದೆ.

ಎಸ್‌ಎಸ್‌ಎಲ್ ಸಿ ಮುಖ್ಯ ಪರೀಕ್ಷೆಗೆ ನೋಂದಣಿ ಮಾಡಲು ಡಿ. 27 ಕ್ಕೆ ಕೊನೆ ದಿನಾಂಕ ನಿಗದಿ ಪಡಿಸಿತ್ತು. ಕ್ರಿಸ್ ಮಸ್ ರಜೆ ಹಾಗೂ ಹಲವು ಶಾಲಾ ವಿದ್ಯಾರ್ಥಿಗಳು ನೋಂದಣಿ ಮಾಡದ ಹಿನ್ನೆಲೆಯಲ್ಲಿ ಮುಖ್ಯ ಪರೀಕ್ಷೆಗೆ ನೋಂದಣಿ ಮಾಡುವ ಕಾಲಾವಕಾಶವನ್ನು ಜ. 10ಕ್ಕೆ ವಿಸ್ತರಣೆ ಮಾಡಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಧಿಸೂಚನೆ ಹೊರಡಿಸಿದೆ .

2021-22 ನೇ ಸಾಲಿನ ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳ ನೋಂದಣಿ, ಪರೀಕ್ಷಾ ಶುಲ್ಕ ಪಾವತಿ ಹಾಗೂ ಪ್ರಸ್ತಾವನೆ ಸಲ್ಲಿಕೆ ದಿನಾಂಕವನ್ನು ಹತ್ತು ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ. ಅದರಂತೆ ಮಂಡಳಿ ಜಾಲ ತಾಣದ ಮೂಲಕ ವಿದ್ಯಾರ್ಥಿಗಳ ಮಾಹಿತಿಯನ್ನು ಮಂಡಳಿ ವೆಬ್ ತಾಣದಲ್ಲಿ ನೋಂದಣಿ ಮಾಡಲು 2022 ಜ.10 ಕೊನೆ ದಿನಾಂಕ ನಿಗದಿ ಮಾಡಲಾಗಿದೆ.

ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಚಲನ್ ಮುದ್ರಿಸಿಕೊಳ್ಳಲು ಕೊನೆ ದಿನಾಂಕವನ್ನು 2022 ಜನವರಿ 17 ನಿಗದಿ ಪಡಿಸಲಾಗಿದೆ. ಜ. 19 ರೊಳಗೆ ಪರೀಕ್ಷಾ ಶುಲ್ಕ ಪಾವತಿಸಲು ಸೂಚಿಸಲಾಗಿದೆ. ಹಿಂದಿನ ವರ್ಷದ ಅನುತ್ತಿರ್ಣ ವಿದ್ಯಾರ್ಥಿಗಳು ಹಳೆಯ ಪದ್ದತಿಯಂತೆ ಜ. 19 ರೊಳಗೆ ಪರೀಕ್ಷಾ ಶುಲ್ಕವನ್ನು ಸೂಚಿಸಿರುವ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಪಾವತಿ ಮಾಡಿ ಅದನ್ನು ಮಂಡಳಿಗೆ ಸಲ್ಲಿಸಲು ಸೂಚಿಸಲಾಗಿದೆ. ತಪ್ಪಿದಲ್ಲಿ ಅಂತಹ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಸಾಧ್ಯವಿಲ್ಲ.

ಹಳೇ ಪದ್ದತಿ ಮೂಲಕ ಪರೀಕ್ಷೆ:

ಎಸ್‌ಎಸ್‌ಎಲ್ ಸಿ ಪರೀಕ್ಷೆಯನ್ನು ಹಳೇ ಪದ್ದತಿಯಂತೆ ಈ ಬಾರಿ ಮಾಡಲು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತೀರ್ಮಾನಿಸಿದೆ. ಕೊರೊನಾ ಹಿನ್ನೆಲೆಯಲ್ಲಿ ಕಳೆದ ವರ್ಷ ಮೂರು ವಿಷಯಗಳಿಗೆ ಸಂಬಂಧಿಸಿದಂತೆ ಒಂದು ಪ್ರಶ್ನೆ ಪತ್ರಿಕೆ ನೀಡಿ ಬಹು ಆಯ್ಕೆ ಮಾದರಿ ಪರೀಕ್ಷೆ ಪರಿಚಯಿಸಲಾಗಿತ್ತು. ಹೀಗಾಗಿ ಕೇವಲ ಎರಡೇ ದಿನದಲ್ಲಿ ಪರೀಕ್ಷೆ ಮುಕ್ತಾಯವಾಗಿತ್ತು. ಕೊರೊನಾ ಹಿನ್ನೆಲೆಯಲ್ಲಿ ಯಾವ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸಬಾರದು ಎಂಬ ಷರತ್ತಿನ ಮೇರೆಗೆ ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡಲಾಗಿತ್ತು. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಈ ಮೊದಲಿನಂತೆ ಬಹುಆಯ್ಕೆ ಪ್ರಶ್ನೆ ಒಳಗೊಂಡಂತೆ ಅರು ವಿಷಯಗಳಿಗೆ ಲಿಖಿತ ಪರೀಕ್ಷೆ ನಡೆಯಲಿದೆ. ಪ್ರಥಮ ಭಾಷೆ 100 ಅಂಕ, ಉಳಿದ ಐದು ವಿಷಯಗಳಿಗೆ ತಲಾ 80 ಅಂಕ ಒಳಗೊಳ್ಳಲಿದೆ. ಆರು ವಿಷಯಗಳಿಗೆ ಪರೀಕ್ಷೆ ನಡೆಸಲು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

ಕೊರೊನಾ ಭೀತಿ ಹಿನ್ನೆಲೆಯಲ್ಲಿ 2021-22 ನೇ ಸಾಲಿನ ಶೈಕ್ಷಣಿಕ ವರ್ಷ ತಡವಾಗಿ ಅರಂಭವಾಗಿತ್ತು. ಪಠ್ಯ ಕ್ರಮದಲ್ಲಿ ಕೆಲವು ಅಧ್ಯಾಯ ಕಡಿತ ಮಾಡಿದ್ದು, ಉಳಿದ ಪಠ್ಯಕ್ರಮ ಆಧರಿಸಿ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಸದ್ಯ ಓಮಿಕ್ರಾನ್ ಪರಿಸ್ಥಿತಿ ಬಗ್ಗೆ ಅವಲೋಕಿಸುತ್ತಿದ್ದು, ಫೆಬ್ರವರಿ- ಮಾರ್ಚ್ ತಿಂಗಳ ಪರಿಸ್ಥಿತಿ ನೋಡಿಕೊಂಡು ಪರೀಕ್ಷಾ ದಿನಾಂಕ ನಿಗದಿ ಪಡಿಸಲು ಚಿಂತನೆ ನಡೆದಿದ್ದು, ಮೇ ತಿಂಗಳಲ್ಲಿ ಪರಿಕ್ಷೆ ನಿಗದಿಯಾಗುವ ಸಾಧ್ಯತೆಯಿದೆ.

Tuesday, 31 August 2021

ನಾಳೆ ರಾಜ್ಯಾದ್ಯಂತ ' ವಿಶೇಷ ಕೊರೋನಾ ಲಸಿಕಾ ಉತ್ಸವ' : ಎಲ್ಲರಿಗೂ ಸಿಗಲಿದೆ ಲಸಿಕೆ.!

 

ಬೆಂಗಳೂರು : ರಾಜ್ಯದಲ್ಲಿ ಪ್ರತಿ ಬುಧವಾರ ವಿಶೇಷ ಲಸಿಕಾ ಉತ್ಸವ ( Special Corona Vaccine Utsav ) ನಡೆಸಲಾಗುತ್ತದೆ. ಈ ಮೂಲಕ 10 ಲಕ್ಷ ಕೊರೋನಾ ಲಸಿಕೆಯನ್ನು ( Corona Vaccine ) ನೀಡುವ ಗುರಿಯನ್ನು ಹೊಂದಲಾಗಿದೆ ಎಂಬುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದರು. ಇದರಂತೆಯೇ ನಾಳೆ ರಾಜ್ಯಾದ್ಯಂತ ವಿಶೇಷ ಲಸಿಕಾ ಉತ್ಸವ ನಡೆಯಲಿದೆ. ಇಂತಹ ಲಸಿಕಾ ಉತ್ಸವದಲ್ಲಿ 2ನೇ ಡೋಸ್ ಪಡೆದವರಿಗೆ, 18 ವರ್ಷ ಮೇಲ್ಪಟ್ಟವರಿಗೂ ಮೊದಲ ಡೋಸ್ ಕೋವಿಶೀಲ್ಡ್, ಕೋವ್ಯಾಕ್ಸಿನ್ ಲಸಿಕೆ ( Covishield and Covaxin ) ಲಭ್ಯವಾಗಲಿದೆ.

ಹೌದು.. ಇನ್ನು ಮುಂದೆ ಪ್ರತಿ ಬುಧವಾರ ವಿಶೇಷ ಲಸಿಕಾ ಉತ್ಸವ ನಡೆಸಿ ಸುಮಾರು 10 ಲಕ್ಷ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದರು. ಆಗಸ್ಟ್ ತಿಂಗಳಲ್ಲೇ 1.10 ಕೋಟಿ ಲಸಿಕೆ ಕೇಂದ್ರ ಸರ್ಕಾರದಿಂದ ಬಂದಿದೆ. ನಾನು ಮತ್ತು ಮುಖ್ಯಮಂತ್ರಿಗಳು ಕೇಂದ್ರದ ಮಟ್ಟದಲ್ಲಿ ಚರ್ಚಿಸಿದ ಬಳಿಕ ಸಮರ್ಪಕವಾಗಿ ಪೂರೈಕೆಯಾಗುತ್ತಿದೆ. ಇನ್ನು ಮುಂದೆ ಪ್ರತಿ ದಿನ 5 ಲಕ್ಷ ಲಸಿಕೆ ನೀಡಲಾಗುವುದು. ವಾರದಲ್ಲಿ ಒಂದು ದಿನ ಬುಧವಾರ ಲಸಿಕಾ ಉತ್ಸವ ನಡೆಸಿ ಈ ಪ್ರಮಾಣವನ್ನು 5 ದಿಂದ 10 ಲಕ್ಷಕ್ಕೆ ಹೆಚ್ಚಿಸಲಾಗುವುದು. ಇದರಿಂದ ಒಂದೂವರೆಯಿಂದ ಎರಡು ಕೋಟಿ ಲಸಿಕೆಯನ್ನು ಒಂದು ತಿಂಗಳಲ್ಲಿ ನೀಡಬಹುದು. ಇಡೀ ದೇಶದಲ್ಲಿ ಲಸಿಕೆ ಕಾರ್ಯ ಪೂರ್ಣಗೊಂಡ ನಗರ ಬೆಂಗಳೂರು ಆಗಬೇಕು ಎಂಬ ಗುರಿ ಇದೆ ಎಂದಿದ್ದರು.

ಇಡೀ ರಾಜ್ಯದಲ್ಲಿ 4 ಕೋಟಿ ಲಸಿಕೆ ನೀಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 1 ಕೋಟಿ ಲಸಿಕೆ ನೀಡಲಾಗಿದೆ. ಬೀದರ್, ಯಾದಗಿರಿ, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ಹೆಚ್ಚು ಮಾಡಲು ಕ್ರಮ ಕೈಗೊಳ್ಳಲಾಗುವುದು. ಕೊಳೆಗೇರಿ ನಿವಾಸಿಗಳಿಗೆ ಪ್ರತಿ ದಿನ ವಿಶೇಷ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಅವರು ವಾಸ ಮಾಡುವ ಸ್ಥಳದಲ್ಲೇ ಸಿಬ್ಬಂದಿ ನಿಯೋಜಿಸಿ ಅಲ್ಲೇ ಲಸಿಕೆ ನೀಡಲಾಗುವುದು. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮೊದಲಾದ ಗಡಿಭಾಗದ ಜಿಲ್ಲೆಗಳಲ್ಲಿ ಆದ್ಯತೆ ನೀಡಲಾಗಿದೆ. ಗಡಿಯಿಂದ 20 ಕಿ.ಮೀ. ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರಾಶಸ್ತ್ಯದಲ್ಲಿ ಲಸಿಕೆ ನೀಡಲಾಗುವುದು. ಡಿಸೆಂಬರ್ ಅಂತ್ಯಕ್ಕೆ ಎರಡೂ ಡೋಸ್ ಲಸಿಕೆ ನೀಡುವ ಗುರಿ ಇದೆ ಎಂದಿದ್ದರು.

ಈ ಹಿನ್ನಲೆಯಲ್ಲಿ ಬೆಂಗಳೂರಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಎಲ್ಲಾ ವಲಯಗಳ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಹೆಚ್ಚಿನ ತಂಡಗಳನ್ನು ರಚಿಸಿಕೊಂಡು, ಕೋವಿಡ್ -19 ಲಸಿಕಾಕರಣವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿದೆ. ಸದರಿ ವಿಷಯಕ್ಕೆ ಸಂಬಂಧಿಸಿದಂತೆ, ಮುಂದಿನ ದಿನಗಳಲ್ಲಿ ಪಾಲಿಕೆಯ ವ್ಯಾಪ್ತಿಯಲ್ಲಿ ಎಲ್ಲಾ ಸಾರ್ವಜನಿಕರಿಗೆ ಕಡ್ಡಾಯವಾಗಿ ಕನಿಷ್ಠ ಒಂದು ಡೋಸ್ ಕೋವಿಡ್ -19 ಲಸಿಕೆ ನೀಡುವ ಗುರಿ ಹೊಂದಿದ್ದು , ಸದರಿ ಗುರಿಯನ್ನು ಯಶಸ್ವಿಯಾಗಿ ತಲುಪಲು ಈ ಕೆಳಕಂಡ ಕ್ರಮಗಳನ್ನು ಅನುಸರಿಸಬೇಕಾಗಿರುತ್ತದೆ.

1. ಪಾಲಿಕೆಯ ಲಸಿಕಾಕರಣದ ಗುರಿಯನ್ನು ಪ್ರತೀ ದಿನಕ್ಕೆ ಒಂದು ಲಕ್ಷ ಪರಿಷ್ಕರಿಸಲಾಗಿದ್ದು, ಎಲ್ಲಾ ವಲಯಗಳಿಗೆ ಒಂದು ಲಕ್ಷದ ಗುರಿ ಹಾಗೂ ಬೇಡಿಕೆಗನುಗುಣವಾಗಿ ಹಂಚಿಕೆ ಮಾಡಲಾಗುವುದು.

2. ನಗರ ಪ್ರಾಥಮಿಕ ಕೇಂದ್ರಗಳ ವ್ಯಾಪ್ತಿಯಲ್ಲಿ ಗುರುತಿಸಿರುವ ಸ್ಥಿರ ಲಸಿಕಾ ಕೇಂದ್ರಗಳನ್ನು ದಿನಾಂಕ: 01-09-2021 ರಿಂದ ಅನ್ವಯವಾಗುವಂತೆ ಬೆಳಗ್ಗೆ 8.00 ರಿಂದ ಮಧ್ಯಾಹ್ನ 2.30 ರವರೆಗೆ ಕಾರ್ಯ ನಿರ್ವಹಿಸುವುದು. ಒಂದು ವೇಳೆ ಮಧ್ಯಾಹ್ನ 2.30 ರ ನಂತರವೂ ಸಾರ್ವಜನಿಕರು ಸರತಿ ಸಾಲಿನಲ್ಲಿ ಕಾಯುತ್ತಿದ್ದರೆ ಲಸಿಕಾರಣದ ಅವಧಿಯನ್ನು ಮುಂದುವರೆಸುವುದು.

3. ಒಂದು ವೇಳೆ ನಗರ ಪ್ರಾಥಮಿಕ ಕೇಂದ್ರಗಳ ವ್ಯಾಪ್ತಿಯಲ್ಲಿ ಲಸಿಕಾ ದಾಸ್ತಾನು 2.30 ಗಂಟೆಯೊಳಗೆ ಖಾಲಿಯಾಗಿದ್ದಲ್ಲಿ ನಿಗಧಿತ ತಂಡಗಳು ಸಾರ್ವಜನಿಕರಿಗೆ ಮರು ದಿನದ ಲಸಿಕೆಗಾಗಿ ಟೋಕನ್‌ನ್ನು ನೀಡುವುದು.

4. ಪ್ರತೀ ವಿಧಾನಸಭಾ ಕ್ಷೇತ್ರವಾರು ಗುರುತಿಸಿರುವ 2 ಲಸಿಕಾ ಕೇಂದ್ರಗಳಲ್ಲಿ ಪ್ರತೀ ದಿನ ಬೆಳಗ್ಗೆ 8.00 ರಿಂದ ರಾತ್ರಿ 9.00 ಗಂಟೆಯವರೆಗೆ ಕಾರ್ಯ ನಿರ್ವಹಿಸುವಂತೆ ಕ್ರಮವಹಿಸುವುದು.

5. ಬಿಬಿಎಂಪಿ‌ ವ್ಯಾಪ್ತಿಯಲ್ಲಿ ಬೃಹತ್ ಲಸಿಕಾ ಶಿಬಿರವನ್ನು ಪ್ರಾಯೋಗಿಕವಾಗಿ ಮೊದಲ ಹಂತದಲ್ಲಿ 3 ಕೇಂದ್ರಗಳಲ್ಲಿ ಬೆಳಗ್ಗೆ 8.00 ರಿಂದ ರಾತ್ರಿ 9.00 ಗಂಟೆಯವರೆಗೆ ಲಸಿಕೆ ನೀಡಲಾಗುವುದು. ಅವಶ್ಯವಿದ್ದಲ್ಲಿ ಸಮಯವನ್ನು ವಿಸ್ತರಿಸಲಾಗುವುದು.

6. ಎಲ್ಲಾ ವಿಭಾಗದ ಆರೋಗ್ಯ ವೈದ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯ ಕೊಳಗೇರಿ ನಿವಾಸಿಗಳು/ಕಡಿಮೆ ಆದಾಯ ಗುಂಪುಗಳು ಹಾಗೂ ಲಸಿಕಾಕರಣ ವಂಚಿತ ಪ್ರದೇಶದಲ್ಲಿ ವಿಶೇಷ ಕ್ಯಾಂಪ್‌ಗಳನ್ನು(ಮನೆಯ ಹತ್ತಿರ) ಎಲ್ಲಾ ಲಸಿಕೆಯನ್ನು ಅವಶ್ಯಕತೆಗನುಗುಣವಾಗಿ ಸಮಯವನ್ನು ನಿಗಧಿಪಡಿಸಿಕೊಳ್ಳಲು ಕ್ರಮವಹಿಸುವುದು.

7. ಹಿರಿಯ ನಾಗರೀಕರಿಗೆ, ಮನೆಯಲ್ಲಿ ಹಾಸಿಗೆ ಹಿಡಿದ ರೋಗಿಗಳಿಗೆ, ಎಇಎಫ್‌ಐ ಪ್ರಕರಣಗಳಿಗೆ ಸಮರ್ಪಕ ವೈದ್ಯಕೀಯ ಸೇವೆಗಳೊಂದಿಗೆ ವಿಶೇಷ ಲಸಿಕಾಕರಣದ(ಮನೆಯ ಹತ್ತಿರ) ಸೌಲಭ್ಯವನ್ನು ಒದಗಿಸಲು ಕ್ರಮವಹಿಸುವುದು.

8. ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳು, ಮಾರುಕಟ್ಟೆಗಳು, ಸರ್ಕಾರಿ ಕಛೇರಿಗಳು, ಟೆಕ್ ‌ಪಾರ್ಕ್‌ಗಳು ಇತ್ಯಾದಿ ಸ್ಥಳಗಳಲ್ಲಿ ಪ್ರಮುಖ ಮೊಬೈಲ್ ಲಸಿಕಾ ಕೇಂದ್ರಗಳ ಮುಖಾಂತರ ಸಾರ್ವಜನಿಕರಿಗೆ ಲಸಿಕೆ ನೀಡಲು ಕ್ರಮವಹಿಸುವುದು (ಗುರುತಿಸಲಾದ ಮೊಬೈಲ್ ಲಸಿಕಾ ಕೇಂದ್ರಗಳಿಗೆ ಹೆಚ್ಚುವರಿ ಲಸಿಕೆಗಳನ್ನು ಹಂಚಿಕೆ ಮಾಡಲಾಗುವುದು).

9. ವಾರದಲ್ಲಿ ಒಂದು ದಿನ ಲಸಿಕಾ ಮೇಳ ದಿನವೆಂದು ನಿಯೋಜಿಸಿ, ಸದರಿ ಮೇಳದಲ್ಲಿ ಕನಿಷ್ಠ 1.5 ರಿಂದ 2 ಲಕ್ಷ ಲಸಿಕಾಕರಣ ಗುರಿ ಸಾಧಿಸುವಂತೆ ಕ್ರಮವಹಿಸುವುದು.

10. ಲಸಿಕಾ ಕೇಂದ್ರಕ್ಕೆ ಆಗಮಿಸುವ ಸಾರ್ವಜನಿಕರಿಗೆ ಕೋವಿಡ್ -19 ರೋಗಲಕ್ಷಣಗಳು ಕಂಡು ಬಂದಲ್ಲಿ ಮಾತ್ರ ಕೋವಿಡ್ -19 ಪರೀಕ್ಷೆಗೆ ಒಳಪಡಿಸುವುದು. ಉಳಿದಂತೆ ಯಾವುದೇ ಕಾರಣಕ್ಕೂ ಕೋವಿಡ್ -19 ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಾರ್ವಜನಿಕರನ್ನು ಒತ್ತಾಯಿಸುವಂತಿಲ್ಲ.

ವಲಯ ಜಂಟಿ ಆಯುಕ್ತರು/ಆರೋಗ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಲಸಿಕಾಕರಣವನ್ನು ತೀವ್ರಗೊಳಿಸಲು ಅವಶ್ಯಕತೆಗನುಗುಣವಾಗಿ ಹೆಚ್ಚಿನ ತಂಡಗಳನ್ನು ರಚಿಸಿಕೊಂಡು ಮೇಲಿನ ಅಂಶಗಳನ್ವಯ ನಿಗಧಿಪಡಿಸಿರುವ ಲಸಿಕಾಕರಣದ ಗುರಿಗಳನ್ನು ಕಡ್ಡಾಯವಾಗಿ ಸಾಧಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಇದೇ ರೀತಿಯಲ್ಲಿ ರಾಜ್ಯದ ಪ್ರತಿ ಜಿಲ್ಲೆ, ತಾಲೂಕು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿ ನಾಳೆ ವಿಶೇಷ ಲಸಿಕಾ ಉತ್ಸವ ನಡೆಯಲಿದೆ. 2ನೇ ಡೋಸ್ ಲಸಿಕೆ ನಿರೀಕ್ಷೆಯಲ್ಲಿದ್ದವರಿಗೆ, ಮೊದಲ ಡೋಸ್ ಲಸಿಕೆ ನಿರೀಕ್ಷೆಯಲ್ಲಿದ್ದವರಿಗೆ ಕೋವಿಶೀಲ್ಡ್, ಕೋವ್ಯಾಕ್ಸಿನ್ ಲಸಿಕೆ ಲಭ್ಯವಾಗಲಿದೆ. ಹೀಗಾಗಿ ತಪ್ಪದೇ ನಿಮ್ಮ ಸಮೀಪದ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಲಸಿಕೆ ಪಡೆಯುವಂತೆ ಆರೋಗ್ಯ ಇಲಾಖೆಯ ಪರವಾಗಿ ನಿಮ್ಮಲ್ಲಿ  ಸಮಗ್ರ ಸಿದ್ಧಿ ಕೂಡ ಮನವಿ ಮಾಡುತ್ತದೆ.

Monday, 30 August 2021

ರಾಜ್ಯದಲ್ಲಿ ಸೆ.6ರಿಂದ 6 ರಿಂದ 8ನೇ ತರಗತಿ ಆರಂಭಿಸೋದಕ್ಕೆ ಸರ್ಕಾರ ಅನುಮತಿ - ಸಚಿವ ಆರ್ ಅಶೋಕ್ ಘೋಷಣೆ

 


ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಶೇ.2ಕ್ಕಿಂತ ಕಡಿಮೆ ಇರುವಂತ ಪಾಸಿಟಿವಿಟಿ ದರ ಆಧರಿಸಿ, ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣ ಕ್ರಮಗಳನ್ನು ಅನುಸರಿ 6 ರಿಂದ 8ನೇ ತರಗತಿಗಳನ್ನು ಸೆಪ್ಟೆಂಬರ್ 6ರಿಂದ ಆರಂಭಿಸಲಾಗುತ್ತದೆ ಎಂಬುದಾಗಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಈ ಕುರಿತಂತೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ನಡೆದಂತ ತಾಂತ್ರಿಕ ತಜ್ಞರ ಸಭೆಯ ಬಳಿಕ ಸಭೆಯ ನಿರ್ಧಾರಗಳನ್ನು ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದ ಕಂದಾಯ ಸಚಿವ ಆರ್.ಅಶೋಕ್ ಅವರು, ಶನಿವಾರ ಮತ್ತು ಭಾನುವಾರ ಹೊರತುಪಡಿಸಿ, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವಂತ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6 ರಿಂದ 6 ರಿಂದ 8ನೇ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂದರು.

ಸೋಮವಾರದಿಂದ ಶುಕ್ರವಾರದವರೆಗೆ ಶಾಲೆಗಳನ್ನು ನಡೆಸಲಾಗುತ್ತದೆ. ಶನಿವಾರ ಮತ್ತು ಭಾನುವಾರ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತದೆ. ಕೇರಳದಿಂದ ಬರೋರಿಗೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ. ಶೇ.50ರಷ್ಟು ಮಕ್ಕಳು ಮಾತ್ರ ಶಾಲೆಗ ಹಾಜರಾಗಬೇಕು. ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಿರುವಂತ ಜಿಲ್ಲೆಗಳಲ್ಲಿ ಶಾಲೆಗಳನ್ನು ಆರಂಭಿಸೋದಕ್ಕೆ ಅನುಮತಿ ಇಲ್ಲ ಎಂದರು.

ಕರ್ನಾಟಕ: 2 ಲಸಿಕೆ ಪಡೆದ ಆರೋಗ್ಯ ಕಾರ್ಯಕರ್ತರಿಗೆ ಪ್ರತಿಕಾಯ ಪರೀಕ್ಷೆ

 

ಬೆಂಗಳೂರು, ಆಗಸ್ಟ್ 30: ಎರಡು ಕೊರೊನಾ ಲಸಿಕೆ ಪಡೆದ ಕಾರ್ಯಕರ್ತರಿಗೆ ಪ್ರತಿಕಾಯಗಳ ಪರೀಕ್ಷೆ ನಡೆಸಲಾಗುತ್ತಿದೆ.

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಕೋವಿಡ್-19 ಪ್ರತಿಕಾಯಗಳ ಪರೀಕ್ಷೆ ನಡೆಸುತ್ತಿದೆ. ಆರೋಗ್ಯ ಕಾರ್ಯಕರ್ತರು ಎರಡೂ ಡೋಸ್ ಗಳ ಲಸಿಕೆಯನ್ನು ಪಡೆದು 6 ತಿಂಗಳು ಪೂರ್ಣಗೊಳಿಸಿದ್ದು, ಈ ಅವಧಿಯಲ್ಲಿ ಪ್ರತಿಕಾಯಗಳ ಕುಸಿತ ಉಂಟಾಗಿದೆಯೇಉಂಟಾಗಿದ್ದರೆ ಮತ್ತೊಂದು ಡೋಸ್ ಲಸಿಕೆ ಅಗತ್ಯವಿದೆಯೇ ಎಂಬುದನ್ನು ಅರಿಯಲು ಈ ಪರೀಕ್ಷೆ ನಡೆಸಲಾಗುತ್ತಿದೆ.

ಕೊರೊನಾ ಲಸಿಕೆಯ ನಡುವಿನ ಅಂತರವನ್ನು 12-16 ರಿಂದ 6-8 ವಾರಗಳಿಗೆ ಇಳಿಕೆ ಮಾಡಬೇಕೆಂದು, ಇಲ್ಲದೇ ಇದ್ದಲ್ಲಿ ಮೊದಲ ಡೋಸ್ ಗಳ ಲಸಿಕೆ ಪಡೆದ ನಂತರ ಸೋಂಕು ಎದುರಾದಲ್ಲಿ ಅದರ ವಿರುದ್ಧ ಹೋರಾಡಲು ಕಷ್ಟವಾಗುತ್ತದೆ. ಎರಡನೇ ಡೋಸ್ ಲಸಿಕೆಯಿಂದ ಉತ್ತಮ ಪ್ರತಿಕಾಯಗಳು ಉತ್ಪಾದನೆಯಾಗುತ್ತದೆ ಎಂದು ಡಾ. ಮಂಜುನಾಥ್ ಅಭಿಪ್ರಾಯಪಟ್ಟಿದ್ದಾರೆ.

ಪ್ರತಿಕಾಯಗಳ ಪರೀಕ್ಷೆ ನಡೆಸುವ ಬಗ್ಗೆ ಹಾಗೂ ಹೆಚ್ಚುವರಿ ಡೋಸ್ ನೀಡುವ ಬಗ್ಗೆ ವೈದ್ಯಕೀಯ ಸಮೂಹದಲ್ಲೇ ಭಿನ್ನಾಭಿಪ್ರಾಯಗಳಿವೆ ಎಂದು ಲಸಿಕೆ ನೀಡುವುದಕ್ಕಾಗಿ ಇರುವ ಎನ್ ಟಿಎಜಿ ಡಾ.ಜಯಪ್ರಕಾಶ್ ಮುಳಿಯಿಲ್ ಹೇಳಿದ್ದಾರೆ.

ಫೆಬ್ರವರಿ ತಿಂಗಳ ವೇಳೆಗೆ ಈ ಆರೋಗ್ಯ ಕಾರ್ಯಕರ್ತರಿಗೆ ಎರಡೂ ಡೋಸ್ ಲಸಿಕೆಯನ್ನು ಪೂರ್ಣಗೊಳಿಸಲಾಗಿತ್ತು. ಏಪ್ರಿಲ್ ತಿಂಗಳಲ್ಲಿ ಪ್ರತಿಕಾಯಗಳಿಗಾಗಿ ಪರೀಕ್ಷೆ ನಡೆಸಿದ್ದಾಗ ಉತ್ತಮ ಫಲಿತಾಂಶ ಬಂದಿತ್ತು.

ಡಾ. ಸಿ.ಎನ್ ಮಂಜುನಾಥ್ ಮಾತನಾಡಿ, ಈಗ ಪರೀಕ್ಷೆಗೊಳಪಡುವ ಆರೋಗ್ಯ ಕಾರ್ಯಕರ್ತರನ್ನು ಸೆಪ್ಟೆಂಬರ್ ನಲ್ಲಿಯೂ ಪರೀಕ್ಷೆಗೊಳಪಡಿಸಲಾಗುತ್ತದೆ. ಏಪ್ರಿಲ್ ನಲ್ಲಿ ಪರೀಕ್ಷೆಗೊಳಪಡಿಸಿದಾಗ ಶೇ.80 ರಷ್ಟು ಮಂದಗೆ ಉತ್ತಮ ಪ್ರತಿಕಾಯಗಳಿತ್ತು. ಮರು ಪರೀಕ್ಷೆ ನಡೆಸುವ ವೇಳೆಗೆ ಎರಡೂ ಡೋಸ್ ಗಳನ್ನು ಪಡೆದು 6 ತಿಂಗಳು ಕಳೆದಿರುತ್ತದೆ.

ಒಂದು ವೇಳೆ ಪ್ರತಿಕಾಯಗಳು ಕಡಿಮೆಯಾದಲ್ಲಿ ಆಸ್ಪತ್ರೆಗಳಲ್ಲಿರುವ ಮುನ್ನೆಲೆ ಕಾರ್ಯಕರ್ತರಿಗೆ ಹೆಚ್ಚುವರಿ ಡೋಸ್ ಗಳನ್ನು ನೀಡುವ ಬಗ್ಗೆ ಸ್ಪಷ್ಟತೆ ಸಿಗಲಿದೆ. ಪ್ರತಿಯೊಬ್ಬರಿಗೂ ಹೆಚ್ಚುವರಿ ಡೋಸ್ ನೀಡಲು ಸಾಧ್ಯವಿಲ್ಲ. ಈಗ ಲಸಿಕೆ ಪೂರೈಕೆ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ನಮ್ಮ ಸ್ವಂತ ಡೇಟಾವನ್ನು ಹೊಂದಿರಬೇಕೆಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಕ್ರಮೇಣ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.70ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.34ರಷ್ಟಿದೆ.

ರಾಜ್ಯದಲ್ಲಿ ಒಂದು ದಿನದಲ್ಲಿ 1262 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1384 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 17 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 37278 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಭಾನುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2947255ಕ್ಕೆ ಏರಿಕೆಯಾಗಿದೆ. ಒಟ್ಟು 2891193 ಸೋಂಕಿತರು ಗುಣಮುಖರಾಗಿದ್ದು. 18758 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ನಗರವೊಂದರಲ್ಲಿ ಕಳೆದ ಒಂದು ದಿನದಲ್ಲಿ 361 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1237286ಕ್ಕೆ ಏರಿಕೆಯಾಗಿದೆ. ಆರು ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15983ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 7343 ಸಕ್ರಿಯ ಪ್ರಕರಣಗಳಿವೆ.

 

ಶಾಲೆಗಳ ಆರಂಭದ ಕುರಿತು ಸಿಎಂ ನಿರ್ಧಾರ - ಸಚಿವ ಬಿ.ಸಿ.ನಾಗೇಶ್

 

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಆರಂಭದ ಕುರಿತು ಮುಖ್ಯಮಂತ್ರಿಗಳು ತಾಂತ್ರಿಕ ಶಿಕ್ಷಣ ಸಮಿತಿ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ. ನಾಗೇಶ್ ಅವರು ಇಂದು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ 'ಜಗನ್ನಾಥ ಭವನ'ಕ್ಕೆ ಭೇಟಿ ನೀಡಿ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಭೇಟಿ ಮಾಡಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಒಂದನೇ ತರಗತಿಯಿಂದ ಶಾಲೆಗಳನ್ನು ಆರಂಭಿಸಬೇಕೇ ಎಂಬ ಬಗ್ಗೆ ತಾಂತ್ರಿಕ ಶಿಕ್ಷಣ ಸಮಿತಿ ನಿರ್ಧಾರದಡಿ ನಿರ್ಣಯಿಸಬೇಕಾಗಿದೆ ಎಂದರು.

ತಾಂತ್ರಿಕ ಸಲಹಾ ಸಮಿತಿ ಜೊತೆ ಮುಖ್ಯಮಂತ್ರಿಗಳ ಸಭೆಯ ಬಳಿಕ ಶಾಲಾ ತರಗತಿಗಳ ಕುರಿತು ನಿರ್ಧರಿಸಲಿದ್ದೇವೆ. ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಸಂಪೂರ್ಣವಾಗಿ ಸಜ್ಜಾಗಿದೆ. ಶಿಕ್ಷಕರೂ ಶಾಲೆಗಳ ಆರಂಭಕ್ಕೆ ಉತ್ಸುಕರಾಗಿ ಕಾಯುತ್ತಿದ್ದಾರೆ ಎಂದರು. ಯಾಕೆ ಶಾಲೆಗಳನ್ನು ಆರಂಭಿಸುತ್ತಿಲ್ಲ ಎಂದು ಪೋಷಕರೂ ಶಾಲೆಗಳಿಗೆ ಬಂದು ಪ್ರಶ್ನಿಸುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳು ಮತ್ತು ಶಾಸಕರ ಇಚ್ಛಾಶಕ್ತಿಯ ಪರಿಣಾಮವಾಗಿ ರಾಜ್ಯದಲ್ಲಿ ದೊಡ್ಡ ತರಗತಿಗಳು ಆರಂಭಗೊಂಡಿವೆ. ಮಕ್ಕಳ ಸಹಭಾಗಿತ್ವ ಮತ್ತು ಪೋಷಕರ ಸಹಕಾರ ಪೂರ್ಣವಾಗಿ ಲಭಿಸಿದೆ. ಬಹುತೇಕ ಶೇ 70ರಷ್ಟು ಮಕ್ಕಳು ಶಾಲೆಗಳಿಗೆ ಬರುತ್ತಿದ್ದಾರೆ ಎಂದು ವಿವರಿಸಿದರು.

ಮುಖ್ಯಮಂತ್ರಿಗಳು ಮಕ್ಕಳ ಜೊತೆ ಸಂವಾದ ನಡೆಸಿದಾಗ ಆನ್‍ಲೈನ್ ತರಗತಿಗಳಿಂದ ಹೆಚ್ಚಿನ ಪ್ರಯೋಜನ ಆಗುತ್ತಿಲ್ಲ ಎಂಬುದು ಗೊತ್ತಾಗಿದೆ. ಅನೇಕ ಮಕ್ಕಳು ಇಡೀ ದಿನ ಶಾಲಾ ತರಗತಿ ನಡೆಸಲು ಮತ್ತು ಕುಡಿಯುವ ನೀರು ಹಾಗೂ ಬುತ್ತಿ ತರಲು ಅವಕಾಶ ಕೊಡುವಂತೆ ಸಿಎಂ ಅವರಲ್ಲಿ ಮನವಿ ಮಾಡಿದ್ದಾರೆ ಎಂದರು.

ಗ್ರಾಮೀಣ ಪ್ರದೇಶಗಳ ಶಾಲೆಗಳಲ್ಲಿ ಮೂಲಸೌಕರ್ಯ ಚೆನ್ನಾಗಿದ್ದು, ಕೋವಿಡ್ ಮಾರ್ಗಸೂಚಿ ಪಾಲನೆ ಕಷ್ಟವಾಗಲಾರದು. ಶಾಲೆಗಳ ಆರಂಭದ ಬಳಿಕ ಕೋವಿಡ್ ಸಂಖ್ಯೆಯಲ್ಲಿ ಹೆಚ್ಚಳ ಆಗಿಲ್ಲ ಎಂದೂ ಅವರು ಪ್ರಶ್ನೆಗೆ ಉತ್ತರ ನೀಡಿದರು.

ಜನಸಾಮಾನ್ಯರ ಕುಂದುಕೊರತೆ ಪರಿಹಾರಕ್ಕಾಗಿ ತಿಂಗಳಿಗೆ ಎರಡು ಬಾರಿ ಎಲ್ಲ ಸಚಿವರು ಪಕ್ಷದ ಕಾರ್ಯಾಲಯಕ್ಕೆ ಭೇಟಿ ಕೊಡಬೇಕೆಂಬ ಆಶಯಕ್ಕೆ ಅನುಗುಣವಾಗಿ ಇಲ್ಲಿಗೆ ಬಂದಿದ್ದೇನೆ. ಸಾಕಷ್ಟು ಜನ ಅಹವಾಲಯಗಳ ಜೊತೆ ಶಿಕ್ಷಣ ಕ್ಷೇತ್ರದ ಬಗ್ಗೆ ಒಂದಷ್ಟು ಒಳ್ಳೆಯ ವಿಚಾರಗಳನ್ನೂ ತಿಳಿಸಿದ್ದಾರೆ. ಕಾರ್ಯಕರ್ತರ ಭೇಟಿಗೂ ಇದು ಸದವಕಾಶ ಎಂದರು.

ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು, ರಾಜ್ಯ ಮಾಧ್ಯಮ ಸಂಚಾಲಕರಾದ ಕರುಣಾಕರ ಖಾಸಲೆ ಮತ್ತು ವೃತ್ತಿಪರ ಪ್ರಕೋಷ್ಠದ ರಾಜ್ಯ ಸಂಚಾಲಕರಾದ ಚನ್ನಮಲ್ಲಿಕಾರ್ಜುನ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

Sunday, 29 August 2021

ಮತ್ತೆ ಲಾಕ್ ಆಗುತ್ತಾ ಬೆಂಗಳೂರು..?

 

ಬೆಂಗಳೂರು,ಆ.29- ಕೊರೊನಾ ಮೂರನೇ ಅಲೆ ನಿಯಂತ್ರಣದ ಬಗ್ಗೆ ಎಚ್ಚರಿಕೆ ವಹಿಸಿರುವ ಬಿಬಿಎಂಪಿ ವಾರ್ನಿಂಗ್ ಹಂತಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.ನಾವೀಗ ಯಾವ ಹಂತದಲ್ಲಿದ್ದೇವೆ. ಎಷ್ಟು ಕೇಸ್‍ಗಳು ದಾಖಲಾದರೆ ಅಪಾಯ, ಯಾವ ಹಂತ ದಾಟಿದ್ರೆ ಲಾಕ್‍ಡೌನ್ ಮಾಡಬೇಕು ಎಂಬ ಬಗ್ಗೆ ಬಿಬಿಎಂಪಿ ಅಧಿಕಾರಿಗಳು ನಗರದಲ್ಲಾದ ಕೊರೊನಾ ಸಾವು-ನೋವಿನ ಅಂಕಿ ಅಂಶಗಳನ್ನು ವಿಶ್ಲೇಷಿಸಿ ವರದಿ ತಯಾರಿಸಿದ್ದಾರೆ.

ಯಾವ ಸಂದರ್ಭದಲ್ಲಿ ಗ್ರೀನ್ ಅಲರ್ಟ್, ಯೆಲ್ಲೊ ಅಲರ್ಟ್, ಆರೆಂಜ್ ಅಲರ್ಟ್ ಮತ್ತು ರೆಡ್ ಅಲರ್ಟ್ ಜಾರಿ ಮಾಡಬೇಕು ಎಂಬ ಬಗ್ಗೆಯೂ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ.ಕೊರೊನಾ ಮೂರನೇ ಅಲೆ ಸಂದರ್ಭದಲ್ಲಿ ನಗರದ್ಯಾಂತ ಭಾರಿ ಮುನ್ನೆಚ್ಚರಿಕೆ ವಹಿಸಬೇಕು ಸ್ವಲ್ಪ ಯಾಮಾರಿದರೂ ಅಪಾಯ ಕಟ್ಟಿಟ್ಟ ಬುತ್ತಿ ಎಂಬುದನ್ನು ಸರ್ಕಾರಕ್ಕೆ ಮನವಿ ಮಾಡಿಕೊಡಲಾಗಿದೆ.

ಗ್ರೀನ್, ಯೆಲ್ಲೊ, ಆರೆಂಜ್ ಹಾಗೂ ರೆಡ್ ಅಲರ್ಟ್ ಲೆವೆಲ್ ಮೀರಿದರೆ ಮತ್ತೆ ಲಾಕ್‍ಡೌನ್ ಮಾಡಬೇಕು ಎಂದು ಪ್ರಸ್ತಾವನೆಯಲ್ಲಿ ತಿಳಿಸಲಾಗಿದೆ.
ಗ್ರೀನ್ ಅಲರ್ಟ್ ಎಂದರೆ 250ಕ್ಕಿಂತ ಕಡಿಮೆ ಪ್ರಕರಣಗಳ ದಾಖಲಾಗುವ ಲೋ ರಿಸ್ಕ್ ಪರಿಸ್ಥಿತಿ, 250 ರಿಂದ 500ರರೊಳಗೆ ಪ್ರಕರಣಗಳು ದಾಖಲಾದರೆ ಅದನ್ನು ಯೆಲ್ಲೊ ಅಲರ್ಟ್ ಎಂದು ಗುರುತಿಸಲಾಗುವುದು.

ಅದೇ ರೀತಿ 500ರಿಂದ ಒಂದು ಸಾವಿರದೊಳಗೆ ಪ್ರಕರಣಗಳು ದಾಖಲಾದರೆ ಅದನ್ನು ಆರೆಂಜ್ ಲೆವೆಲ್ ಎಂದು ಹಾಗೂ ಒಂದೇ ದಿನ ಒಂದು ಸಾವಿರಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾದರೆ ಅದನ್ನು ರೆಡ್ ಅಲರ್ಟ್ ಎಂದು ಪರಿಗಣಿಸಲಾಗುವುದು.

ಪರಿಸ್ಥಿತಿ ನಾಲ್ಕನೆ ಹಂತ ಕೈ ಮೀರಿದರೆ ಲಾಕ್‍ಡೌನ್ ಅನಿವಾರ್ಯ ಎಂಬ ಸ್ಥಿತಿಯನ್ನು ಮತ್ತೆ ಎದುರಿಸಬೇಕಾಗುವುದು.ಸದ್ಯ ಬಿಬಿಎಂಪಿ ಎರಡನೆ ಹಂತ ಅಂದರೆ ಯೆಲ್ಲೊ ಅಲರ್ಟ್ ವ್ಯಾಪ್ತಿಯಲ್ಲಿರುವುದರಿಂದ ಆತಂಕ ಪಡಬೇಕಿಲ್ಲ.

ಆದರೆ, ಹಬ್ಬ ಹರಿದಿನಗಳು ಅಂತ ಜನ ಮೈಮರೆತು ಮಹಾಮಾರಿಯನ್ನು ಮೈಮೇಲೆ ಎಳೆದುಕೊಂಡರೆ ಮತ್ತೆ ಡೆಂಜರ್ ಜೋನ್ ತಲುಪುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಜೀವನದ ಮೇಲೆ ಕೆಲವು ಕಟ್ಟುನಿಟ್ಟಿನ ನಿರ್ಬಂಧ ಅನಿವಾರ್ಯ ಎಂದು ಬಿಬಿಎಂಪಿ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ.

Saturday, 28 August 2021

20 ದಿನದಲ್ಲಿ ಸಿಇಟಿ ರಿಸಲ್ಟ್: ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು,ಆ.28- ರಾಜ್ಯಾದ್ಯಂತ ಇಂದಿನಿಂದ ಆರಂಭವಾಗಿರುವ ಸಿಇಟಿ ಪರೀಕ್ಷೆಯ ಫಲಿತಾಂಶ ಇನ್ನು 20 ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಶೇಷಾದ್ರಿಪುರಂ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ.30ಕ್ಕೆ ಸಿಟಿ ಪರೀಕ್ಷೆ ಮುಗಿಯುತ್ತದೆ. ಹೀಗಾಗಿ ಕ್ಷಿಪ್ರಗತಿಯಲ್ಲಿ ಫಲಿತಾಂಶ ನೀಡಲು ಕ್ರಮ ವಹಿಸಲಾಗಿದೆ. ತದನಂತರ ಅಕ್ಟೋಬರ್ ನಲ್ಲಿ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ನಡೆಸಲಾಗುವುದು ಎಂದರು.

ರಾಜ್ಯದ 530 ಕೇಂದ್ರ ಸೇರಿ ಬೆಂಗಳೂರಿನ 86 ಕೇಂದ್ರಗಳಲ್ಲೂ ಪರೀಕ್ಷೆ ಉತ್ತಮವಾಗಿ ನಡೆಯುತ್ತಿದೆ. ಎಲ್ಲೂ ಯಾವುದೇ ಸಮಸ್ಯೆ ಇಲ್ಲ. ಕೋವಿಡ್ ನಿಯಮಗಳಿಗೊಳಪಟ್ಟೇ ಪರೀಕ್ಷೆ ನಡೆಸಲಾಗಿದೆ. ಪರೀಕ್ಷೆಗೆ 2,01,816 ವಿದ್ಯಾರ್ಥಿಗಳ ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ ಕೋವಿಡ್ ಪಾಸಿಟಿವ್ ಇರುವ 12 ವಿದ್ಯಾರ್ಥಿಗಳ ಪೈಕಿ 4 ವಿದ್ಯಾರ್ಥಿಗಳಿಗೆ ನೆಗೆಟಿವ್ ವರದಿ ಬಂದಿದೆ. ಪಾಸಿಟಿವ್ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಿ ಪರೀಕ್ಷೆ ಬರೆಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಕೇಂದ್ರಗಳಿಂದ ಮಾಹಿತಿ ಬಂದಿದ್ದು, ಎಲ್ಲೂ ಯಾವುದೇ ಸಮಸ್ಯೆ ಆಗಿಲ್ಲ. ಕೇರಳದ ಗಡಿ ಜಿಲ್ಲೆಗಳಲ್ಲಿ ಲಾಕ್‍ಡೌನ್ ಮತ್ತು ವೀಕೆಂಡ್ ಕಫ್ರ್ಯೂ ಇದ್ದರೂ ಆ ಜಿಲ್ಲೆಗಳಲ್ಲೂ ತೊಂದರೆ ಉಂಟಾಗಿಲ್ಲ. ಮುಖ್ಯವಾಗಿ ಮಂಗಳೂರು, ಉಡುಪಿ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಪರೀಕ್ಷೆ ಸುಸೂತ್ರವಾಗಿ ಸಾಗಿದೆ ಎಂದು ಅವರು ಮಾಹಿತಿ ನೀಡಿದರು

Friday, 27 August 2021

ಆಪರೇಷನ್ ಹಸ್ತ : ಜೆಡಿಎಸ್ನ ಮತ್ತಿಬ್ಬರು ಶಾಸಕರಿಗೆ ಗಾಳ..

 

ಬೆಂಗಳೂರು, ಆ.27- ಮುಂದಿನ ವಿಧಾನಸಭೆ ಚುನಾವಣೆ ವೇಳೆಗೆ ಜೆಡಿಎಸ್‍ನಿಂದ ಸುಮಾರು 7 ರಿಂದ 8 ಮಂದಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗುವ ನಿರೀಕ್ಷೆಗಳಿದೆ. ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಪ್ರಬಲ ಪಕ್ಷವಾಗಿದ್ದು, ಕಾಂಗ್ರೆಸ್‍ಗೆ ಪೈಪೋಟಿ ನೀಡುತ್ತಿದೆ. ಈ ಭಾಗದಲ್ಲಿ ಅತಿ ಹೆಚ್ಚು ಶಾಸಕರನ್ನು ಹೊಂದಿರುವ ಜೆಡಿಎಸ್ ಪಕ್ಷ ಸಂಘಟನೆಗೆ ಹೆಚ್ಚು ಆದ್ಯತೆ ನೀಡುತ್ತಿದೆ.

ಅದರ ಹೊರತಾಗಿ ಕೂಡ ಕೆಲವರು ಕಾಂಗ್ರೆಸ್‍ನತ್ತ ಮುಖ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ. ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ.ದೇವೇಗೌಡ ಜೆಡಿಎಸ್ ತೊರೆಯುವುದನ್ನು ಖಚಿತಪಡಿಸಿದ್ದು, ಕಾಂಗ್ರೆಸ್ ಸೇರ್ಪಡೆಗೆ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿರುವುದಾಗಿ ಅವರು ಹೇಳಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದ ಎಸ್.ಆರ್.ಶ್ರೀನಿವಾಸ್ ಕೂಡ ಕಾಂಗ್ರೆಸ್ ಜತೆ ಗುರುತಿಸಿಕೊಳ್ಳಲಾರಂಭಿಸಿದ್ದಾರೆ.

ಇದೇ ರೀತಿ ಮೈಸೂರು, ಮಂಡ್ಯ, ತುಮಕೂರು, ಕೋಲಾರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಜೆಡಿಎಸ್‍ನ ಪ್ರಮುಖ ನಾಯಕರು ಹಾಗೂ ಶಾಸಕರು ಕಾಂಗ್ರೆಸ್ ಸೇರಲು ಒಲವು ತೋರಿಸಿದ್ದಾರೆ ಎನ್ನಲಾಗಿದೆ. ಆದರೆ ಕಾಂಗ್ರೆಸ್ ಪಕ್ಷ ಈಗಾಗಲೇ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಗುರುತಿಸುವ ಪ್ರಯತ್ನ ಮಾಡುತ್ತಿದೆ. ಜೆಡಿಎಸ್ ಅಥವಾ ಇನ್ಯಾವುದೇ ಪಕ್ಷದಿಂದ ಹಾಲಿ ಶಾಸಕರು ಬಂದರೆ ಅವರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕಾದ ಅನಿವಾರ್ಯತೆ ಎದುರಾಗಲಿದೆ.

ಹೀಗಾಗಿ ಕಾಂಗ್ರೆಸ್ ನಾಯಕರು ಅಳೆದು ತೂಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಹಿರಿಯ ನಾಯಕ ಅಲ್ಲಂ ವೀರಭದ್ರಪ್ಪ ಅವರ ನೇತೃತ್ವದ ಸಮಿತಿ ಪರಿಶೀಲನೆ ನಡೆಸಿ ಅಂಗೀಕಾರ ನೀಡಿದ ಬಳಿಕವಷ್ಟೇ ವಿವಿಧ ಪಕ್ಷಗಳ ನಾಯಕರನ್ನು ಕಾಂಗ್ರೆಸ್‍ಗೆ ಸೇರ್ಪಡೆ ಮಾಡಿಕೊಳ್ಳಲಾಗುತ್ತಿದೆ.

ಆದರೆ ಹಾಲಿ ಶಾಸಕರನ್ನು ಸೇರ್ಪಡೆ ಮಾಡಿ ಕೊಳ್ಳುವಾಗ ಕೆಲವು ನಿಯಮಾವಳಿಗಳನ್ನು ಸಡಿಲ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಕಳೆದ ಚುನಾವಣೆಯಲ್ಲಿ ಗೆದ್ದವರು 5 ವರ್ಷಗಳ ಕಾಲ ಶಾಸಕರಾಗಿ ಸೇವೆ ಮಾಡಿರುವ ಜತೆಗೆ ಪಕ್ಷ ಸಂಘಟನೆ ಕೂಡ ಮಾಡಿರುತ್ತಾರೆ. ಅವರದೇ ಆದಂತಹ ಅಭಿಮಾನಿ ವರ್ಗ, ಮತದಾರರಿರುತ್ತಾರೆ.

ಹಾಲಿ ಶಾಸಕರ ಸೇರ್ಪಡೆಯಿಂದ ಪಕ್ಷಕ್ಕೆ ಲಾಭವಾಗಲಿದೆ. ಆದರೆ ಕಾಂಗ್ರೆಸ್ ಒಳ ವಲಯದಲ್ಲಿರುವ ಹಿತಕ್ಕೆ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂಬ ಸಲಹೆಗಳು ಕೇಳಿ ಬಂದಿವೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್‍ನಿಂದ ಬಹಳಷ್ಟು ನಾಯಕರು ವಲಸೆ ಬರುವ ನಿರೀಕ್ಷೆ ಇದೆ.ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿದ್ದರೂ ಕೂಡ ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆಯೇ ಹೆಚ್ಚು ಪೈಪೋಟಿ ಇದೆ.

Tuesday, 24 August 2021

ಪಠ್ಯಪುಸ್ತಕವಿಲ್ಲದೇ ಶಾಲೆ ಆರಂಭ, ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ.

 

ಬೆಂಗಳೂರು: ಮಕ್ಕಳಿಗೆ ಪುಸ್ತಕ ನೀಡದೆ 9 ಮತ್ತು 10ನೇ ತರಗತಿಗಳನ್ನು ಆರಂಭಿಸಲಾಗಿದ್ದು, ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಪಠ್ಯಪುಸ್ತಕಗಳನ್ನು ಒದಗಿಸಲು ಪೂರ್ವಸಿದ್ಧತೆ ಏಕೆ ಕೈಗೊಂಡಿಲ್ಲ? ಪಠ್ಯಪುಸ್ತಕಗಳು ಇಲ್ಲದೆ ಮಕ್ಕಳಿಗೆ ಶಾಲೆ ಆರಂಭಿಸಿರುವುದು ಅರ್ಥಹೀನವಾಗಿದೆ. ಪಠ್ಯಪುಸ್ತಕ ಪೂರೈಕೆ ಬಗ್ಗೆ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಸರ್ಕಾರಿ, ಅನುದಾನಿತ ಶಾಲೆಗಳಿಗೆ ಪಠ್ಯಪುಸ್ತಕ ಪೂರೈಸಬೇಕು. 9, 10 ನೇ ತರಗತಿಯ ಮಕ್ಕಳಿಗೆ ಪಠ್ಯ ಪುಸ್ತಕ ಪೂರೈಕೆ ಮಾಡಬೇಕು ಎಂದು ತಿಳಿಸಲಾಗಿದ್ದು, ಆಗಸ್ಟ್ 30 ರೊಳಗೆ ವಿವರಣೆ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ ಎನ್ನಲಾಗಿದೆ.

Monday, 23 August 2021

ಶಾಲಾ, ಕಾಲೇಜು ಪ್ರಾರಂಭದ ಹಿನ್ನಲೆಯಲ್ಲಿ ಖುಷಿ ಹಂಚಿಕೊಂಡ ವಿದ್ಯಾರ್ಥಿಗಳು.


ಬೆಂಗಳೂರು: 'ಆನ್​​ಲೈನ್​​ಗಿಂತ ಆಫ್​​ಲೈನ್ ಕ್ಲಾಸ್​​ಗಳೇ ಬೆಸ್ಟ್ ಸರ್. ತುಂಬಾ ಖುಷಿಯಾಗಿದೆ, ನಿಮಗೆ ಧನ್ಯವಾದಗಳು' ಎಂದು ವಿದ್ಯಾರ್ಥಿಗಳು, ಇಂದು 9, 10 ನೇ ಇಯತ್ತೆ ತರಗತಿಗಳು ಮತ್ತು ಪಿಯು ತರಗತಿಗಳು ಪುನರಾರಂಭವಾದ ಸಂಭ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಜೊತೆಗೆ ಹಂಚಿಕೊಂಡರು.

ಖುದ್ದು ಪರಿಶೀಲನೆಗಾಗಿ ಸಚಿವರು ಮತ್ತು ಅಧಿಕಾರಿಗಳೊಂದಿ ಸಿಎಂ ಬೊಮ್ಮಾಯಿ‌ ಅವರು, ಇಂದು ಮಲ್ಲೇಶ್ವರಂನ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿದರು‌. ಪ್ರಿನ್ಸಿಪಾಲರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಂವಾದ ನಡೆಸಿದಾಗ ವಿದ್ಯಾರ್ಥಿಗಳು ಮುಕ್ತವಾಗಿ ತಮ್ಮ ಅಭಿಪ್ರಾಯ ಹೇಳಿದರು.

'ಆನ್​​ಲೈನ್ ತರಗತಿಯಲ್ಲಿ ಶಿಕ್ಷಕರೊಂದಿಗೆ ಪ್ರಶ್ನೋತ್ತರಗಳಿಗೆ ಅವಕಾಶವಿಲ್ಲ. ಏನಾದರೂ ಡೌಟ್ ಬಂದರೆ ಕೇಳುವಂತಿಲ್ಲ. ನೆಟ್​ವರ್ಕ್ ಸಮಸ್ಯೆಯಿಂದ ಕೆಲವೊಮ್ಮೆ ಸರಿಯಾಗಿ ಕೇಳಿಸುತ್ತಿದ್ದಿಲ್ಲ. ಸಂಪರ್ಕ ಕಡಿತವಾದಾಗ ಒಂಟಿಯಾಗಿ ಗೋಡೆ ನೋಡುತ್ತಾ ಕುಳಿತುಕೊಳ್ಳಬೇಕಾಗುತ್ತಿತ್ತು' ಎಂದೊಬ್ಬ ವಿದ್ಯಾರ್ಥಿನಿ ಹೇಳಿದಳು.

ನೇರ ತರಗತಿ ಪುನಾರಂಭಿಸಿರುವುದು ಹಿಗ್ಗು ಹಿಡಿಯಲಾರದಷ್ಟಾಗಿದೆ. ಶಿಕ್ಷಕರ ಜೊತೆ ನೇರ ಸಂವಾದ ನಡೆಸಬಹುದು. ಬಹಳ ದಿನಗಳ ನಂತರ ಸಹಪಾಠಿಗಳ ಜೊತೆಗೂ ಬೆರೆತು, ಪರಸ್ಪರ ಚರ್ಚಿಸಲು ಅವಕಾಶ ಸಿಕ್ಕಿದೆ. ನಿಮಗೆ(ಸಿಎಂ) ಎಷ್ಟು ಥ್ಯಾಂಕ್ಸ್ ಹೇಳಿದರೂ ಸಾಲದು ಎಂದು ವಿದ್ಯಾರ್ಥಿಗಳು ಹರ್ಷದ ಹೊಳೆಯಲ್ಲಿ ಮಿಂದೆದ್ದರೆ, ಪ್ರಿನ್ಸಿಪಾಲರು ಹಾಗೂ ಶಿಕ್ಷಕರು ಸಹಿತ ಹರ್ಷೋಲ್ಲಾಸ ವ್ಯಕ್ತಪಡಿಸಿದರು.

ಸಿಎಂ ಬೊಮ್ಮಾಯಿ ಮಾತನಾಡಿ, 'ಕೆಲವು ದಿನಗಳ ಹಿಂದೆಯಷ್ಟೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸಿದೆವು. ಇವತ್ತು ನಿಜವಾಗಲೂ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಕರೊನಾದಿಂದ ಸ್ವಾತಂತ್ರ್ಯ ದೊರೆತಿದೆ. ಅಷ್ಟೊಂದು ಸಂಭ್ರಮ-ಸಡಗರದಲ್ಲಿ ಇರುವುದು ಕಂಡು ಸರ್ಕಾರದ ಪ್ರಯತ್ನ ಸಾರ್ಥಕಗೊಳಿಸಿದ ಭಾವ ಮೂಡಿದೆ' ಎಂದರು. ಪಾಲಕರು ನಿರ್ಭೀತಿಯಿಂದ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು‌. ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಶಾಲೆ-ಕಾಲೇಜುಗಳಿಗೆ ಹಾಜರಾಗಬೇಕು ಎಂದು ಮನವಿ ಮಾಡಿದರು.

ವಿದ್ಯಾರ್ಥಿಗಳು ಎಲ್ಲಿ? ಯಾವಾಗ? ಏಕೆ? ಹೇಗೆ? ಎಂದು ಪ್ರಶ್ನೆಗಳನ್ನು ಹಾಕಿಕೊಳ್ಳಬೇಕು. ತಾರ್ಕಿಕವಾಗಿ ಚಿಂತನೆ ಮಾಡಬೇಕು. ಕಷ್ಟಪಟ್ಟು ಓದಿ ಯಶಸ್ಸು ಗಳಿಸಿ. ಜೊತೆಗೆ ಆರೋಗ್ಯದ ಕಡೆ ಗಮನ ಹರಿಸಿ ಎಂದ ಸಿಎಂ ಬೊಮ್ಮಾಯಿ, 'ಜೀವನವಿಡೀ ವಿದ್ಯಾರ್ಥಿಯೇ ಆಗಿರಬೇಕು. ಇಲ್ಲಿ ಟೈಂ ಟೇಬಲ್​ ಇರುತ್ತೆ, ಶಿಕ್ಷಕರು ಇರುತ್ತಾರೆ. ಆದ್ರೆ ಕಾಲೇಜು ಮುಗಿದ ಮೇಲೆ ಅಲ್ಲಿ ಶಿಕ್ಷಕರು ಇರೋದಿಲ್ಲ. ಆಗ ಪ್ರತಿನಿತ್ಯ ಪರೀಕ್ಷೆ ಇರುತ್ತೆ, ಅದಕ್ಕೆ ನೀವು ತಯಾರಾಗಬೇಕು' ಎಂದು ಸಿಎಂ ಕಿವಿಮಾತು ಹೇಳಿದರು.

Thursday, 19 August 2021

ಕರ್ನಾಟಕ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಸೆಪ್ಟೆಂಬರ್ 27, 29 ರಂದು. ನೋಂದಣಿ ಆಗಸ್ಟ್ 19 ರಿಂದ ಆರಂಭವಾಗುತ್ತದೆ.

 

ಬೆಂಗಳೂರು: ಕರ್ನಾಟಕ ಪ್ರೌಶಿಕ್ಷಣ ಪರೀಕ್ಷಾ ಮಂಡಳಿ ಎಸ್‌ಎಸ್‌ಎಲ್‌ಸಿಗೆ ಪೂರಕ ಪರೀಕ್ಷೆಯನ್ನು ಸೆಪ್ಟೆಂಬರ್ 27 ಮತ್ತು 29 ರಂದು ಎರಡು ದಿನ ಸರಳವಾಗಿ ನಡೆಸಲು ನಿರ್ಧರಿಸಿದೆ.

ಮುಖ್ಯ ಪರೀಕ್ಷೆಯಂತೆಯೇ, ಪರೀಕ್ಷೆಯನ್ನು ಕೋರ್ ವಿಷಯಗಳು ಮತ್ತು ಭಾಷೆಗಳ ನಡುವೆ ವಿಂಗಡಿಸಲಾಗುತ್ತದೆ, ತಲಾ 40 ಅಂಕಗಳು. ಪರೀಕ್ಷೆಗಳು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ನಡೆಯಲಿದೆ.

ಪರೀಕ್ಷೆಯು ವಸ್ತುನಿಷ್ಠ ಮಾದರಿಯ ರೂಪದಲ್ಲಿರುತ್ತದೆ - ಪ್ರತಿ ಪೇಪರ್ ತನ್ನ OMR (ಆಪ್ಟಿಕಲ್ ಮಾರ್ಕ್ ರೀಡರ್) ಹಾಳೆಯನ್ನು ಹೊಂದಿರುತ್ತದೆ. ವಿದ್ಯಾರ್ಥಿಗಳು ಮೂರು ಗಂಟೆಗಳಲ್ಲಿ 120 ಪ್ರಶ್ನೆಗಳಿಗೆ ಉತ್ತರಿಸಬೇಕಾಗುತ್ತದೆ. OMR ಶೀಟ್ ವಿದ್ಯಾರ್ಥಿಗಳ ಛಾಯಾಚಿತ್ರಗಳನ್ನು ಹೊಂದಿರುತ್ತದೆ.

ವಿದ್ಯಾರ್ಥಿಗಳ ಹೆಸರಿನ ಪಟ್ಟಿಯು ಅವರ ಚಿತ್ರಗಳನ್ನು ಸಹ ಹೊಂದಿರುತ್ತದೆ.

ಪರೀಕ್ಷೆಗೆ ನೋಂದಾಯಿಸಲು ಕೆಲವು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿರುತ್ತದೆ - ಅರ್ಹ ಶಾಲಾ ವಿದ್ಯಾರ್ಥಿಗಳು ಮತ್ತು ಖಾಸಗಿ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಮೊದಲೇ ನೋಂದಾಯಿಸಿಕೊಂಡವರು ಮತ್ತು ಕೋವಿಡ್ 19 ಅಥವಾ ಇತರ ಆರೋಗ್ಯ ಕಾರಣಗಳಿಂದಾಗಿ ಗೈರುಹಾಜರಾಗಿದ್ದರುಶಾಲಾ ವಿದ್ಯಾರ್ಥಿಗಳು ಅಥವಾ ಖಾಸಗಿ ಅಭ್ಯರ್ಥಿಗಳು ಪುನರಾವರ್ತಕರು ಮತ್ತು ಏಪ್ರಿಲ್ 2019 ರಲ್ಲಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು; 2011 ಕ್ಕಿಂತ ಮೊದಲು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ರಿಪೀಟರ್‌ಗಳು, ಮತ್ತು ಈ ವಿದ್ಯಾರ್ಥಿಗಳು ಏಪ್ರಿಲ್ 2019 ರಿಂದ ಮುಖ್ಯ ಪರೀಕ್ಷೆ ಬರೆದು ಅನುತ್ತೀರ್ಣರಾದರು.

ಶಾಲೆಗಳು ಆಗಸ್ಟ್ 19 ರಿಂದ 30 ರವರೆಗೆ ವಿದ್ಯಾರ್ಥಿಗಳನ್ನು ಪೋರ್ಟಲ್‌ನಲ್ಲಿ ನೋಂದಾಯಿಸಲು ಪ್ರಾರಂಭಿಸುತ್ತವೆ.

ವಿದ್ಯಾರ್ಥಿಗಳು ಸೆಪ್ಟೆಂಬರ್ 9 ರೊಳಗೆ ಪರೀಕ್ಷೆಗೆ ಅರ್ಜಿ ಸಲ್ಲಿಸುವ ನಿರೀಕ್ಷೆಯಿದೆ - ಇದರಲ್ಲಿ ಕವರ್ ಲೆಟರ್, ನಾಮಿನಲ್ ರೋಲ್ ಸಂಖ್ಯೆ ಮತ್ತು ಮೂಲ ಆನ್‌ಲೈನ್ ಚಲನ್ ಸೇರಿವೆ.

ಮೌಲ್ಯಮಾಪನ

ಪ್ರಮುಖ ವಿಷಯಗಳ ಅಂಕಗಳನ್ನು 80 ಅಂಕಗಳ ಯೋಜನೆಗೆ ಪರಿವರ್ತಿಸಲಾಗುತ್ತದೆ. ಮೊದಲ ಭಾಷೆಯನ್ನು 100 ಕ್ಕೆ ಅಂಕಗಳಿಗೆ ಪರಿವರ್ತಿಸಲಾಗುತ್ತದೆ. ಉಳಿದ ಅಂಕಗಳನ್ನು ಆಂತರಿಕ ಮೌಲ್ಯಮಾಪನದಿಂದ ನೀಡಲಾಗುವುದು, ಆ ಮೂಲಕ 625 ಅಂಕಗಳ ವಿದ್ಯಾರ್ಥಿಗಳಿಗೆ, CCERF ಮತ್ತು CCERR ವಿದ್ಯಾರ್ಥಿಗಳಿಗೆ ಅಂದರೆ ಶಾಲಾ ವಿದ್ಯಾರ್ಥಿಗಳಿಗೆ ಕೋವಿಡ್ 19 ಅಥವಾ ಮುಖ್ಯ ಪರೀಕ್ಷೆಗೆ ಗೈರುಹಾಜರಾಗಿದ್ದರು ಇತರ ಆರೋಗ್ಯ ಕಾರಣಗಳು, ಮತ್ತು ಏಪ್ರಿಲ್ 2019 ರಲ್ಲಿ SSLC ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಶಾಲಾ ವಿದ್ಯಾರ್ಥಿಗಳು.

ಇತರ ವಿದ್ಯಾರ್ಥಿಗಳಿಗೆ, ಕೋರ್ ವಿಷಯಗಳಿಗೆ ಅಂಕಗಳನ್ನು 100 ಕ್ಕೆ ಮತ್ತು ಮೊದಲ ಭಾಷೆಗೆ, 125 ಕ್ಕೆ ಮಾರ್ಕ್ ಮಾಡಲಾಗುತ್ತದೆ.

ಶೋಭಾ ಖರಂದ್ಲಾಜೆ ರೈತರನ್ನು 'ಮಧ್ಯವರ್ತಿಗಳು' ಎಂದು ಕರೆದಿದ್ದಕ್ಕಾಗಿ ಕ್ಷಮೆಯಾಚಿಸಲಿ: ಸಿದ್ದರಾಮಯ್ಯ.



ಬೆಂಗಳೂರು: ರೈತರನ್ನು 'ಮಧ್ಯವರ್ತಿಗಳು' ಎಂದು ಕರೆದಿದ್ದಕ್ಕಾಗಿ ಕೃಷಿ ಮತ್ತು ರೈತರ ಕಲ್ಯಾಣಕ್ಕಾಗಿ ಕೇಂದ್ರ ಸಚಿವಾಲಯದ ಶೋಭಾ ಖರಂದ್ಲಾಜೆ ಅವರನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬುಧವಾರ ಟೀಕಿಸಿದ್ದಾರೆ ಮತ್ತು ಅವರ ಟೀಕೆಗಳಿಗೆ ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಸರಣಿ ಟ್ವೀಟ್‌ಗಳಲ್ಲಿ ಸಿದ್ದರಾಮಯ್ಯ ಅವರು ರೈತರ ಪ್ರತಿಭಟನೆಗಳು ಮಂತ್ರಿ ಸ್ಥಾನಕ್ಕಾಗಿ ಕರ್ನಾಟಕದಲ್ಲಿ ಬಿಜೆಪಿ ನಾಯಕರು ನಡೆಸುತ್ತಿರುವ ಪ್ರತಿಭಟನೆಗಳಂತಲ್ಲ ಎಂದು ಹೇಳಿದರು. ರಾಜ್ಯದಲ್ಲಿ ರೈತರ ಚಳುವಳಿಗೆ ಶ್ರೀಮಂತ ಇತಿಹಾಸವಿದೆ, ಪ್ರೊ.ಎಂ.ಡಿ. ನಂಜುಂಡಸ್ವಾಮಿ ಮತ್ತು ಇತರ ಪ್ರಮುಖ ನಾಯಕರು ಇಂತಹ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ ಎಂದರು.

"ಅವರು ನಮ್ಮ 'ಅನ್ನದಾತ'ರನ್ನು' ದಲ್ಲಾಳಿಗಳು 'ಮತ್ತು' ಮಧ್ಯವರ್ತಿಗಳು 'ಎಂದು ಕರೆಯುವ ಮೂಲಕ ಅವಮಾನ ಮಾಡಿದ್ದಾರೆ. ಸಂವಿಧಾನವು ಶಾಂತಿಯುತ ಪ್ರತಿಭಟನೆಗಳನ್ನು ನಡೆಸುವ ಹಕ್ಕನ್ನು ನೀಡಿದೆ ಮತ್ತು ರೈತರು ಕೇವಲ ರೈತ ವಿರೋಧಿ ಕಾನೂನುಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಆಕೆ ತನ್ನ ಹೇಳಿಕೆಯನ್ನು ಹಿಂಪಡೆಯಬೇಕು ಮತ್ತು ಕ್ಷಮೆಯಾಚಿಸಬೇಕು "ಎಂದು ಅವರು ಒತ್ತಾಯಿಸಿದರು. ಶೋಭಾ ಹೇಳಿಕೆಯು ಬಿಜೆಪಿಯ ಅಧಿಕೃತ ನಿಲುವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. "ಪ್ರಧಾನಿ ನರೇಂದ್ರ ಮೋದಿ ಅದನ್ನು ಒಪ್ಪಿಕೊಳ್ಳಬೇಕು ಅಥವಾ ಬೇಜವಾಬ್ದಾರಿಯುತ ಟೀಕೆಗಳಿಗಾಗಿ ಆಕೆಯ ವಿರುದ್ಧ ಕ್ರಮ ಕೈಗೊಳ್ಳಬೇಕು" ಎಂದು ಅವರು ಆಗ್ರಹಿಸಿದರು.

ಜನ ಆಶೀರ್ವಾದ ಯಾತ್ರೆಯ ವೇಳೆ, ಸಂಸದರು ದೆಹಲಿಯಲ್ಲಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸಿದವರು ರೈತರಲ್ಲ, ಮಧ್ಯವರ್ತಿಗಳು ಮತ್ತು ದಲ್ಲಾಳಿಗಳು ಎಂದು ಟೀಕಿಸಿದ್ದರು. 

.

ಬೊಮ್ಮಾಯಿ ಅವರ ಮೊದಲ ಕ್ಯಾಬಿನೆಟ್ ಸಭೆಯಲ್ಲಿ: ಆರೋಗ್ಯ ರಕ್ಷಣೆಯ ಬಗ್ಗೆ ಮಹತ್ವದ ಕಾಳಜಿ ಸಾಧ್ಯತೆ.

 ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಗುರುವಾರ ಬೆಳಿಗ್ಗೆ, ಎಲ್ಲಾ 29 ಸಚಿವರು ಭಾಗವಹಿಸುವ ನಿರೀಕ್ಷೆಯಿದೆ, ಸಾಂಕ್ರಾಮಿಕ ರೋಗವು ಇನ್ನೂ ಕಠಿಣ ವಾಸ್ತವವೆಂದು ಪರಿಗಣಿಸಿ, ಆರೋಗ್ಯ ರಕ್ಷಣೆಯತ್ತ ಗಮನಹರಿಸುವ ಸಾಧ್ಯತೆಯಿದೆ. ಕೋವಿಡ್‌ನ ಮಾನಸಿಕ ಪರಿಣಾಮಗಳು ಜನರ ಮೇಲೆ ಪರಿಣಾಮ ಬೀರುವುದರಿಂದ, ತಜ್ಞರು ಕ್ಯಾಬಿನೆಟ್ ಚರ್ಚಿಸುವ ನಿರೀಕ್ಷೆಯಿರುವ ಹಲವು ಪ್ರಾಯೋಗಿಕ ಬದಲಾವಣೆಗಳನ್ನು ಸೂಚಿಸಿದ್ದಾರೆ.

ಇದು ಮಾನಸಿಕ ಆರೋಗ್ಯ ರಕ್ಷಣೆ ಕಾಯಿದೆಯ ಅಡಿಯಲ್ಲಿ ಮಾರ್ಗಸೂಚಿಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ. ಹದಿಹರೆಯದ ಹುಡುಗಿಯರಿಗೆ ಆರೋಗ್ಯ ಸೇವೆ ಒದಗಿಸುವ ಅಗತ್ಯತೆ ಇದೆ, ಅವರು ಎಲ್ಲಾ ಅನುದಾನಿತ ಮತ್ತು ಸರ್ಕಾರಿ ಸಂಸ್ಥೆಗಳಲ್ಲಿ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ನೀಡುವ ಕುರಿತು,  ಕಾರ್ಯಸೂಚಿಯಲ್ಲಿದೆ. ಅಧಿಕೃತ ಅಂದಾಜಿನ ಪ್ರಕಾರ ಈ ಸೇವೆಗೆ  ಸುಮಾರು 50 ಕೋಟಿ ರೂ.ಮೀಸಲು.

ಕ್ಯಾಬಿನೆಟ್ ಸುಮಾರು 2,900 ಆರೋಗ್ಯ ಕೇಂದ್ರಗಳಿಗೆ ಆಡಳಿತಾತ್ಮಕ ಅನುಮೋದನೆಯನ್ನು ನೀಡುವ ನಿರೀಕ್ಷೆಯಿದೆ, ಇವುಗಳನ್ನು ಸುಮಾರು 480 ಕೋಟಿ ರೂಪಾಯಿಗಳ ಅಂದಾಜು ವೆಚ್ಚದಲ್ಲಿ ಹೆಚ್ಚು ಸಮಗ್ರ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗುವುದು. ರಾಜ್ಯವು ಕೋವಿಡ್ ಸಾಂಕ್ರಾಮಿಕ ರೋಗವನ್ನು ಎದುರಿಸುತ್ತಿರುವ ಸಮಯದಲ್ಲಿ, ಆರೋಗ್ಯ ಕೇಂದ್ರಗಳ ಉನ್ನತೀಕರಣವು ರಾಜ್ಯದಾದ್ಯಂತದ ಬಡವರ ಸೇವೆಗೆ ಸಹಾಯ ಮಾಡುತ್ತದೆ.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ಮಿನಿ ವಿಧಾನ ಸೌಧಕ್ಕೆ ಮಂತ್ರಿಮಂಡಲವು ಆಡಳಿತಾತ್ಮಕ ಅನುಮೋದನೆಯನ್ನು ನೀಡುವ ನಿರೀಕ್ಷೆಯಿದೆ, ಇದು ಜನರ ಬಹುಕಾಲದ ಬೇಡಿಕೆಯಾಗಿದೆ. ಕಾಮಗಾರಿಗೆ ಸುಮಾರು 12.5 ಕೋಟಿ ಮಂಜೂರು ಮಾಡುವ ನಿರೀಕ್ಷೆ ಇದೆ. ಬೆಂಗಳೂರಿನ ಮಾತಾ ಅಮೃತಾನಂದಮಯಿ ಮಠದಿಂದ ಆಗ್ನೇಯ ಬೆಂಗಳೂರಿನಲ್ಲಿ 22 ಎಕರೆಗಳಷ್ಟು ಭೂಬಳಕೆಯನ್ನು ಬದಲಿಸಲು ಕೋರಿ ಬೆಂಗಳೂರಿನ ಸರ್ಜಾಪುರ ರಸ್ತೆಯ ಬೇಡಿಕೆಯಿತ್ತು, ಮತ್ತು ಕ್ಯಾಬಿನೆಟ್ ಅಧಿಕಾರಿಗಳನ್ನು ಭೇಟಿ ಮಾಡಿದ ಆಶ್ರಮ ಕೈದಿಗಳಿಂದ ಈ ಬೇಡಿಕೆಗೆ ಆಡಳಿತಾತ್ಮಕ ಅನುಮೋದನೆ ನೀಡುವ ನಿರೀಕ್ಷೆಯಿದೆ. . ಕ್ಯಾಬಿನೆಟ್ ಮಂಗಳೂರು ನಗರ ನಿಗಮಕ್ಕೆ ಘನ ತ್ಯಾಜ್ಯ ನಿರ್ವಹಣಾ ಯೋಜನೆಯನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ, ಅಂದಾಜು ರೂ .74 ಕೋಟಿ ವೆಚ್ಚದಲ್ಲಿ.ಆಗುವ ನಿರೀಕ್ಷೆ ಇದೆ

Wednesday, 18 August 2021

ಕೊರೋನಾದಿಂದ ಗುಣಮುಖರಾದವರಿಗೆ 'TB ಟೆಸ್ಟ್' ಗೆ ಒಳಗಾಗುವಂತೆ ರಾಜ್ಯ ಸರ್ಕಾರ ಒತ್ತಾಯ!

ಬೆಂಗಳೂರು : ಕೋವಿಡ್ -19 ನಿಂದ ಚೇತರಿಸಿಕೊಂಡವರಲ್ಲಿ ಕ್ಷಯರೋಗ (TB) ರೋಗವು ಹೆಚ್ಚಾಗುತ್ತಿರುವುದರಿಂದ ಜನರಿಗೆ ಸ್ವಯಂಪ್ರೇರಣೆಯಿಂದ ಕ್ಷಯರೋಗ (ಟಿಬಿ) ಟೆಸ್ಟ್ ಮಾಡಿಸಿಕೊಳ್ಳುವಂತೆ ಒತ್ತಾಯಿಸಲಾಗುತ್ತಿದೆ.

ಇದಕ್ಕಾಗಿ ರಾಜ್ಯ ಸರ್ಕಾರವು 'ಸ್ಪೆಷಲ್ ಟಿಬಿ ಟೆಸ್ಟ್ ಡ್ರೈವ್ಅನ್ನು ಸಹ ಪ್ರಾರಂಭಿಸಿದೆ, ಇದು ಆಗಸ್ಟ್ 31 ರವರೆಗೆ ಜಾರಿ ಇರಲಿದೆ.

ಈ ಕುರಿತು ಮಾತನಾಡಿದ ಆರೋಗ್ಯ ಸಚಿವ ಡಾ ಕೆ ಸುಧಾಕರ್, ಕೋವಿಡ್ -19 ರಿಂದ ಚೇತರಿಸಿಕೊಂಡವರು ಸ್ವಯಂಪ್ರೇರಣೆಯಿಂದ ಕ್ಷಯರೋಗ ಟೆಸ್ಟ್ ಮಾಡಿಸಿಕೊಳ್ಳಬೇಕು. ಆರಂಭಿಕ ಹಂತದಲ್ಲಿ ರೋಗ ಪತ್ತೆಯಾದರೆ ಚಿಕಿತ್ಸೆ ಸುಲಭವಾಗುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ 28 ಲಕ್ಷಕ್ಕೂ ಹೆಚ್ಚು ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕೋವಿಡ್ -19 ಮತ್ತು ಟಿಬಿ ಎರಡೂ ಶ್ವಾಸಕೋಶಗಳಿಗೆ ಸೋಂಕು ತಗುಲಿರುವ ಕಾರಣ ನಾವು ಈ ವಿಶೇಷ ಡ್ರೈವ್ ಅನ್ನು ಪ್ರಾರಂಭಿಸಿದ್ದೇವೆ, ಇದು ಕೊರೋನಾದಿಂದ ಚೇತರಿಸಿಕೊಂಡ ಜನರಲ್ಲಿ ಕ್ಷಯರೋಗವನ್ನು ಮೊದಲೇ ಪತ್ತೆ ಮಾಡುತ್ತದೆ ಹೇಳಿದ್ದಾರೆ.

ಕೋವಿಡ್ -19 ರಿಂದ ಚೇತರಿಸಿಕೊಂಡ ಎಲ್ಲ ರೋಗಿಗಳಿಗೆ ಟಿಬಿ(Tuberculosis) ಬರುತ್ತದೆ ಎಂದಲ್ಲ, ಆದರೆ ಕೋವಿಡ್ -19 ಮತ್ತು ಟಿಬಿ ಎರಡೂ ಪ್ರಾಥಮಿಕವಾಗಿ ಶ್ವಾಸಕೋಶಗಳಿಗೆ ಸೋಂಕು ತಗುಲುವುದರಿಂದ, ಚೇತರಿಸಿಕೊಂಡ ರೋಗಿಗಳು ಸ್ವಯಂಪ್ರೇರಣೆಯಿಂದ ಟಿಬಿ ಟೆಸ್ಟ್ ಮಾಡಿಸಿಕೊಳ್ಳುವುದು ಬಹಳ ಮುಖ್ಯ ಹೇಳಿದರು.

ಕೊರೋನಾದಿಂದಾಗಿ ರಾಜ್ಯದಲ್ಲಿ ಕ್ಷಯರೋಗ ಪತ್ತೆ ಮಾಡಲಾಗಿದೆ. 2017 ರಿಂದ 75 ಲಕ್ಷ ಶಂಕಿತ ಪ್ರಕರಣಗಳನ್ನು ಗುರುತಿಸಲಾಗಿದೆ ಮತ್ತು ಅವುಗಳಲ್ಲಿ ಶೇ.88 ಪರೀಕ್ಷೆ ಮಾಡಲಾಗಿದೆ ಅವರಲ್ಲಿ ಸುಮಾರು 3.9% ಜನರು ಟಿಬಿಯಿಂದ ಸೋಂಕಿಗೆ ಒಳಗಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಕೊರೋನಾ ಮೂರನೆ ಅಲೆ ಬಗ್ಗೆ ಹೆಚ್ಚುತ್ತಿರುವ ಆತಂಕಗಳ ನಡುವೆ 'ಆರೋಗ್ಯ ನಂದನ' ಎಂಬ ಹೊಸ ಯೋಜನೆ ಒಂದಕ್ಕೆ ಚಾಲನೆ ನೀಡಿದ ಮಾತನಾಡಿದ ಸಚಿವ ಸುಧಾಕರ್, ಈ ಯೋಜನೆಯ ಅಡಿಯಲ್ಲಿ, ಕಡಿಮೆ ರೋಗನಿರೋಧಕ ಶಕ್ತಿ ಮತ್ತು ಇತರ ಸಹವರ್ತಿಗಳನ್ನು ಹೊಂದಿರುವ ಮಕ್ಕಳನ್ನು ಗುರುತಿಸಲಾಗುವುದು ಮತ್ತು ಅವರಿಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಪೌಷ್ಟಿಕ ಆಹಾರ ಮತ್ತು ಪೂರಕಗಳನ್ನು ನೀಡಲಾಗುವುದು. ಅವರ ಆರೋಗ್ಯವನ್ನು ಮೇಲ್ವಿಚಾರಣೆ ಮಾಡಲು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

 

Featured post

148 ವರ್ಷಗಳ ನಂತರ, 10 ಜೂನ್ 2021 ರ ಮೊದಲ ಸೂರ್ಯಗ್ರಹಣ!!,

ಸಮಗ್ರ ಸುದ್ದಿ ಸ್ಪೇಷಲ್ : ಅಪರೂಪದ ಖಗೋಳ ವಿದ್ಯಾಮಾನದ ಕುರಿತಾಗಿ ವಿಶೇಷ ಲೇಖನ, ನವೀನ್.ಪಿ.ಆಚಾರ್ , ಸಹ ಕಾರ್ಯದರ್ಶಿ , ಚಿತ್ರದುರ್ಗ ವಿಜ್ಞಾನ ಕೇಂದ್ರ.  ಗ್ರಹಣ ಎಂದಾಕ...